ಮೈಸೂರು:ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ಟೇಕ್ ವೇಳೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಮಹಿಳೆಯೊಬ್ಬರು ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.
ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಅವರು ಮೈಸೂರಿನಿಂದ ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು.
ಈ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಮಹಿಳೆಯು ಬಸ್ನ ಕಿಟಕಿಯಿಂದ ಕತ್ತನ್ನು ಹೊರಹಾಕಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತವಾಗಿದೆ. ಪರಿಣಾಮ ಶಿವಲಿಂಗಮ್ಮ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.