ಶಿವಮೊಗ್ಗ: ಹೊಳೆಗಿಳಿದು ಆತ್ಮಹತ್ಯೆಗೆ ಯತ್ನಿಸಿದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಪೊಲೀಸರು ರಕ್ಷಿಸಿದ ಘಟನೆ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ಸೋಮವಾರ ನಡೆಯಿತು. ಸಾಗರ ಪಟ್ಟಣದ ಅಣಲೇಕೊಪ್ಪದ ನಿವಾಸಿ 26 ವರ್ಷದ ಗೃಹಿಣಿ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ತನ್ನ 13 ವರ್ಷದ ಮಗಳು ಹಾಗೂ 4 ವರ್ಷದ ಮಗನೊಂದಿಗೆ ಕುಗ್ವೆ ಗ್ರಾಮದ ಸಮೀಪದ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸ್ಥಳೀಯರೊಬ್ಬರು ಮಾಹಿತಿ ನೀಡಿರುವಂತೆ, ಸಾಗರದಿಂದ ಕುಗ್ವೆಗೆ ಸ್ಕೂಟಿಯಲ್ಲಿ ಮಕ್ಕಳೊಂದಿಗೆ ಬಂದ ಮಹಿಳೆ ರಸ್ತೆ ಬದಿ ವಾಹನ ನಿಲ್ಲಿಸಿ, ಮೊಬೈಲ್ ಹಾಗೂ ಚಪ್ಪಲಿಯನ್ನು ಬಿಟ್ಟು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ತಡೆದು ಸಮಾಧಾನಪಡಿಸಿ ವಾಪಸ್ ಕಳುಹಿಸಿದರು. ಅಲ್ಲಿಂದ ಹೋದ ಆಕೆ ಪುನಃ ಹೊಳೆ ಬದಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.