ಕರ್ನಾಟಕ

karnataka

ETV Bharat / state

ಯಾದಗಿರಿ: ಪಿಎಸ್ಐ ಪರಶುರಾಮ್ ಹೃದಯಾಘಾತದಿಂದ ಸಾವು - PSI died of heart attack - PSI DIED OF HEART ATTACK

ಯಾದಗಿರಿ ನಗರ ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

PSI Parasuram died of heart attack  heart attack  Yadgiri
ಪಿಎಸ್ಐ ಪರಶುರಾಮ್ ಹೃದಯಾಘಾತದಿಂದ ಸಾವು (ETV Bharat)

By ETV Bharat Karnataka Team

Published : Aug 3, 2024, 11:38 AM IST

ಯಾದಗಿರಿ:ನಗರ ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಗುರುವಾರದಂದು ನಗರ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆದಿತ್ತು. ಕರ್ತವ್ಯದಿಂದ ಬಿಡುಗಡೆಗೊಂಡಿದ್ದರು. ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಶುಕ್ರವಾರ ಸಂಜೆ ಪೊಲೀಸ್ ವಸತಿ ನಿಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಪಿಎಸ್ಐ ಪರಶುರಾಮ ಸಾವಿನ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿ ನಗರದ ಖಾಸಗಿ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನೆ ಮಾಡುವ ವೇಳೆ ಆಂಬ್ಯುಲೆನ್ಸ್ ಅಡ್ಡಗಟ್ಟಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಾರಾಗೃಹ ಶಿಕ್ಷೆ - Rape case Judgement

ABOUT THE AUTHOR

...view details