ಕರ್ನಾಟಕ

karnataka

ETV Bharat / state

ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಣೆ ಮಾಡಿದರೆ ಸಂತೋಷ: ಸಂಸದ ಯದುವೀರ್ - YADUVEER WODIYAR

ಸಂವಿಧಾನದಲ್ಲಿ ಯಾವುದೇ ನಂಬಿಕೆ ಇಟ್ಟುಕೊಳ್ಳಲು ಹಾಗೂ ಆಚರಣೆ ಮಾಡಲು ಅವಕಾಶವಿದೆ. ಹಾಗಂತ ಇನ್ನೊಬ್ಬರ ಭಾವನೆಗಳಿಗೆ ಧಕ್ಕೆ ಆಗುವಂತೆ ಆಚರಿಸುವುದು ಸರಿಯಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

Yaduveer Krishnadatta Chamaraja Wodiyar
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (ETV Bharat)

By ETV Bharat Karnataka Team

Published : Sep 29, 2024, 6:07 PM IST

Updated : Sep 29, 2024, 7:06 PM IST

ಉಡುಪಿ: "ಚಾಮುಂಡಿ ಬೆಟ್ಟ ಧಾರ್ಮಿಕ ಪ್ರದೇಶವಾಗಿದ್ದು, ಚಾಮುಂಡೇಶ್ವರಿ ತಾಯಿಯನ್ನು ಮಹಿಷಾಸುರ ಮರ್ದಿನಿ ಎಂದು ನಾವು ನಂಬುತ್ತೇವೆ. ಹೀಗಾಗಿ ಈ ಭಾವನೆಗೆ ಧಕ್ಕೆ ಆಗದಂತೆ ಮಹಿಷಾ ದಸರಾ ಆಚರಣೆ ಮಾಡಿದರೆ ನಮಗೆ ಸಂತೋಷ" ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಮೈಸೂರು ಮಹಿಷಾ ದಸರಾ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿಂದು ಮಾಧ್ಯಮಗಳ ಪ್ರಶ್ನೆ ಉತ್ತರಿಸಿದ ಅವರು, "ನಾನೊಬ್ಬ ಜವಾಬ್ದಾರಿಯುತ ಪ್ರತಿನಿಧಿ. ಸಂವಿಧಾನದಲ್ಲಿ ಯಾವುದೇ ನಂಬಿಕೆಗಳನ್ನು ಇಟ್ಟುಕೊಳ್ಳಲು ಅವಕಾಶವಿದೆ. ಮನೆಯಲ್ಲಿ ಯಾವುದೇ ಆಚರಣೆ ಮಾಡಬಹುದು. ಸಾರ್ವಜನಿಕ ಸ್ಥಳಗಳಲ್ಲೂ ಸರ್ಕಾರದಿಂದ ಅನುಮತಿ ಪಡೆದು ಆಚರಣೆ ಮಾಡಿಕೊಳ್ಳಬಹುದಾಗಿದೆ" ಎಂದರು.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (ETV Bharat)

ಇನ್ನು, ಮುಡಾ ಹಗರಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, "ವಾಲ್ಮೀಕಿ ನಿಗಮ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ. ಈಗಾಗಲೇ ಎಫ್ಐಆರ್ ಕೂಡ ದಾಖಲಾಗಿದೆ. ಮುಖ್ಯಮಂತ್ರಿ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಜೀನಾಮೆ ಕೊಟ್ಟು ತನಿಖೆಯನ್ನು ಎದುರಿಸಲಿ. ತನಿಖೆಯಲ್ಲಿ ಏನು ವರದಿ ಬರುತ್ತದೆಯೋ ಅದನ್ನು ನೋಡಿಕೊಂಡು ನಂತರ ಮುಂದುವರೆಯಲಿ" ಎಂದು ಹೇಳಿದರು.

ಇದನ್ನೂ ಓದಿ:ಮಹಿಷ ಮಂಡಲೋತ್ಸವ/ಮಹಿಷ ದಸರಾ: ನಿಷೇಧಾಜ್ಞೆ ಜಾರಿ - Mahisha Dasara

Last Updated : Sep 29, 2024, 7:06 PM IST

ABOUT THE AUTHOR

...view details