ಕರ್ನಾಟಕ

karnataka

ETV Bharat / state

ನೈಋತ್ಯ ಮುಂಗಾರು ತಗ್ಗುವ ಲಕ್ಷಣ ಗೋಚರ; ಹಿಂಗಾರು ಮಳೆ ಆರ್ಭಟ ಶುರು- 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert - KARNATAKA RAIN ALERT

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಆರಂಭವಾಗಿದ್ದು, ಹವಾಮಾನ ಇಲಾಖೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

Meteorological Department
ಹಿಂಗಾರು ಮಳೆ ಮುನ್ಸೂಚನೆ (ETV Bharat)

By ETV Bharat Karnataka Team

Published : Oct 4, 2024, 7:03 PM IST

ಬೆಂಗಳೂರು:ನೈಋತ್ಯ ಮುಂಗಾರು ಕಡಿಮೆಯಾಗುವ ಲಕ್ಷಣಗಳು ಗೋಚರಿಸಿದ್ದು, ಹಿಂಗಾರು ಮಳೆಯ ಅಬ್ಬರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 14 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮುಂದಿನ 24 ಗಂಟೆಗಳ ಕಾಲ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಹಲವೆಡೆ ಗುಡುಗುಸಹಿತ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಭಾರಿ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಹೆಚ್ಚು ಮಳೆ?:ನಿನ್ನೆಯಿಂದ ಅತಿ ಹೆಚ್ಚು 4 ಸೆ.ಮೀ ಮಳೆ ಕೊಪ್ಪಳ ಜಿಲ್ಲೆಯ ತಾವರಗೇರಾ ಮತ್ತು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ದಾಖಲಾಗಿದೆ. 3 ಸೆ.ಮೀ ಮಳೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಕಲ್ಬುರ್ಗಿ ಜಿಲ್ಲೆಯ ಖಜೂರಿ, ತುಮಕೂರು ಜಿಲ್ಲೆಯ ಬರಗೂರು ಮತ್ತು ವಿಜಯಪುರದಲ್ಲಿ ಬಿದ್ದಿದೆ ಎಂದು ಇಲಾಖೆ ತಿಳಿಸಿದೆ.

"ಉತ್ತರ ಬಂಗಾಳ ಕೊಲ್ಲಿ, ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಪಕ್ಕದ ಕರಾವಳಿ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, 5.8 ಕಿ.ಮೀ ಎತ್ತರದಲ್ಲಿರುವ ಚಂಡಮಾರುತ ಪಶ್ಚಿಮಕ್ಕೆ ವಾಲುತ್ತಿದೆ. ಲಕ್ಷದ್ವೀಪ ಮತ್ತು ನೆರೆಹೊರೆಯ ಮೇಲಿನ ಚಂಡಮಾರುತದ ಪರಿಚಲನೆಯು ಈಗ ಆಗ್ನೇಯ ಅರೇಬಿಯನ್ ಸಮುದ್ರದ ಮೇಲಿದ್ದು, ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದೆ. ಅದು ದಕ್ಷಿಣ ಕೇರಳದೆಡೆ ಸಾಗುತ್ತಿದೆ. ಇದರಿಂದ ನೈಋತ್ಯ ಮುಂಗಾರು ದುರ್ಬಲವಾಗುವತ್ತ ಸಾಗಲಿದ್ದು, ಹಿಂಗಾರಿನ ಪ್ರಭಾವ ರಾಜ್ಯದಲ್ಲಿ ಗೋಚರಿಸಿದೆ. ಸದ್ಯ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೇ ಸ್ಥಳಗಳಲ್ಲಿ ಮಳೆ ಸುರಿಯುತ್ತಿದೆ" ಎಂದು ಬೆಂಗಳೂರು ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ:ನೈಋತ್ಯ ಮುಂಗಾರು ಮತ್ತೆ ಚುರುಕು: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert

ABOUT THE AUTHOR

...view details