ಕರ್ನಾಟಕ

karnataka

ETV Bharat / state

ರಾಜ್ಯದ 8 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ - Karnataka Weather Report - KARNATAKA WEATHER REPORT

ಇಂದಿನಿಂದ ಸೆಪ್ಟೆಂಬರ್‌ 5ರವರೆಗೆ ಬೀದರ್ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

KARNATAKA WEATHER REPORT
ಮಳೆಯಲ್ಲಿ ವಾಹನಗಳ ಸಂಚಾರ (IANS)

By ETV Bharat Karnataka Team

Published : Sep 3, 2024, 10:19 AM IST

ಬೆಂಗಳೂರು:ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇಂದಿನಿಂದ ಸೆ.5 ರವರೆಗೆ ಭಾರಿ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಬೀದರ್, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ರಾಮನಗರ, ವಿಜಯನಗರ, ಕೊಡಗು, ಹಾಸನ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕಲ್ಯಾಣ ಕರ್ನಾಟಕ, ಕರಾವಳಿ ಹೊರತುಪಡಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆಯಾಗುತ್ತಿದೆ. ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ.

ಹೆಚ್​ಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಮೂರು ತಿಂಗಳಿಂದ ಅಬ್ಬರಿಸಿದ್ದ ಮುಂಗಾರು ತಗ್ಗುವ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಕೇವಲ ಯೆಲ್ಲೋ ಅಲರ್ಟ್​ ಘೋಷಣೆ - Yellow alert

ABOUT THE AUTHOR

...view details