ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮುಂಗಾರು ಅಬ್ಬರ ಮತ್ತಷ್ಟು ಜೋರು: 10 ಜಿಲ್ಲೆಗಳಲ್ಲಿ ಇಂದು, ನಾಳೆ ಯೆಲ್ಲೋ ಅಲರ್ಟ್ - Yellow alert in karnataka - YELLOW ALERT IN KARNATAKA

ರಾಜ್ಯದ ಹಲವೆಡೆ ಮುಂಗಾರು ಮಳೆ ಜೋರಾಗಿದ್ದು, 10 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

rain alert
ಮಳೆ (Photo: IANS)

By ETV Bharat Karnataka Team

Published : Jun 12, 2024, 12:31 PM IST

ಬೆಂಗಳೂರು: Heavy rain in Karnataka:ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳ ವಿರಾಮದ ನಂತರ ಮತ್ತೆ ರಾಜ್ಯದೆಲ್ಲೆಡೆ ವರ್ಷಧಾರೆ ವ್ಯಾಪಿಸಿಕೊಂಡಿದೆ. ಕರಾವಳಿಯ ಮೂರೂ ಜಿಲ್ಲೆಗಳ ಹಲವೆಡೆ ನಿನ್ನೆ ಧಾರಾಕಾರ ಮಳೆಯಾಗಿದ್ದು, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗಿದೆ.

ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿರುವ ಪರಿಣಾಮ ನದಿ ಹಾಗೂ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚುತ್ತಿದೆ. ಇಂದು ಹಾಗೂ ನಾಳೆ ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

YELLOW ALERT IN KARNATAKA ; ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇಂದಿನಿಂದ ಮೂರು ದಿನ 31 ಜಿಲ್ಲೆಗಳಲ್ಲೂ ವರ್ಷಧಾರೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ.

ಘಟಪ್ರಭಾ ಮತ್ತು ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ನಿನ್ನೆ ಒಳಹರಿವು ಹೆಚ್ಚಾಗಿದೆ. ಒಳನಾಡಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲಿರುವ ಕಾರಣ ನೆರೆ ಉಂಟಾದಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಸಜ್ಜಾಗುವಂತೆ ಆಯಾ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಮುಂಗಾರು ಭೋರ್ಗರೆತ: ಐದು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ - Karnataka Monsoon

ABOUT THE AUTHOR

...view details