ಕರ್ನಾಟಕ

karnataka

ETV Bharat / state

ಮತ್ತೆ ಮಳೆ ಮುನ್ಸೂಚನೆ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ನವೆಂಬರ್ 14ರಿಂದ ಮಳೆಯಾಗುವ ಸಾಧ್ಯತೆ ಇದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

KARNATAKA WEATHER UPDATE
ಮಳೆಯಲ್ಲಿ ವಾಹನ ಸಂಚಾರ (ಸಂಗ್ರಹ ಚಿತ್ರ) (IANS)

By ETV Bharat Karnataka Team

Published : Nov 12, 2024, 10:55 AM IST

ಬೆಂಗಳೂರು:ರಾಜ್ಯದ ಬಹುತೇಕ ಕಡೆಗಳಲ್ಲಿ ನವೆಂಬರ್ 14ರಿಂದ ಮಳೆಯಾಗಲಿದ್ದು ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ಚಿತ್ರದುರ್ಗ, ದಾವಣಗೆರೆ, ತುಮಕೂರು, ರಾಮನಗರ, ಕೋಲಾರ, ಗದಗ, ಬೆಳಗಾವಿ, ಬೀದರ್, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರಿನಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ:ಇಳಿದ 'ಬಿಳಿ ಬಂಗಾರ'ದ ಬೆಲೆ: ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸುವಂತೆ ಸರ್ಕಾರಕ್ಕೆ ರೈತರ ಆಗ್ರಹ

ABOUT THE AUTHOR

...view details