ಬೆಂಗಳೂರು:ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮತೋಲನಗೊಳಿಸಲು ಯೋಗ ಉತ್ತಮ ಮಾರ್ಗ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ಇಂದು ಆಯುಷ್ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಯೋಗಾಭ್ಯಾಸ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಯೋಗ ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳಲ್ಲಿ ಹಾಸುಹೊಕ್ಕಾಗಿದೆ. ಇಡೀ ಪ್ರಪಂಚದ ಭಾಗವಾಗಿರುವ ನಮ್ಮ ಗ್ರಂಥಗಳಲ್ಲಿ ಯೋಗದ ಮಹತ್ವವನ್ನು ಉಲ್ಲೇಖಿಸಲಾಗಿದೆ. ಅದಕ್ಕಾಗಿಯೇ ಭಾರತವನ್ನು ಯೋಗ ಗುರುವೆಂದು ಪರಿಗಣಿಸಲಾಗಿದೆ ಎಂದರು.
10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಗಣ್ಯರು (ETV Bharat) ಯೋಗ ಮಾಡುವಾಗ ನಾವು ದೈಹಿಕವಾಗಿ ಆರೋಗ್ಯಕರ, ಮಾನಸಿಕವಾಗಿ ಶಾಂತ ಮತ್ತು ಭಾವನಾತ್ಮಕವಾಗಿ ತೃಪ್ತಿ ಹೊಂದುತ್ತೇವೆ. ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿನ ಸರ್ವಧರ್ಮಗಳ ಸಮ್ಮೇಳನದಲ್ಲಿ ಯೋಗದ ವೈಶಿಷ್ಟ್ಯಗಳನ್ನು ಪ್ರಸ್ತಾಪಿಸಿದರು ಮತ್ತು ಇಡೀ ಜಗತ್ತಿಗೆ ಯೋಗವನ್ನು ಪರಿಚಯಿಸಿದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ನ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಕ್ರೀಡಾಪಟುಗಳು, ಚಿತ್ರ ನಟರು ಇದ್ದರು.
ಯೋಗೋತ್ಸವದಲ್ಲಿ 6 ಲಕ್ಷ ಜನರು ಭಾಗಿ: ಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ಯೋಗೋತ್ಸವ ಎಂಬ ಹತ್ತು ದಿನಗಳ ವಿಶಿಷ್ಟ ಕಾರ್ಯಕ್ರಮವನ್ನು ಜೂನ್ 10ರಿಂದ 20ರವರೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ 664, ವಸತಿ ನಿಲಯದ 90,300 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ:ರಾಜ್ಯದೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಧಾನಸೌಧ ಮುಂಭಾಗ ರಾಜ್ಯಪಾಲರಿಂದ 'ಯೋಗೋತ್ಸವ' ಉದ್ಘಾಟನೆ - International Day of Yoga