ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ನೋಡಲು ಬಂದಿದ್ದ ಯುವಕನೋರ್ವ ಹೋರಿ ತಿವಿದು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತನನ್ನು ಪುನೀತ್ ಆಚಾರ್(19) ಎಂದು ಗುರುತಿಸಲಾಗಿದೆ. ಸೋಮವಾರ ಕಲ್ಮನೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು.
ಈ ಸ್ಪರ್ಧೆಯನ್ನು ನೋಡಲು ಪುನೀತ್ ಆಚಾರ್ ತನ್ನ ಸ್ನೇಹಿತರ ಜೊತೆ ಹೋಗಿದ್ದರು. ಈ ವೇಳೆ ಹೋರಿಯು ಪುನೀತ್ಗೆ ತಿವಿದಿದೆ. ತಕ್ಷಣ ಆತನನ್ನು ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರುವ ಸಂದರ್ಭದಲ್ಲಿ ಪುನೀತ್ ಸಾವನ್ನಪ್ಪಿದರು.