ಕರ್ನಾಟಕ

karnataka

ETV Bharat / state

ಮಚ್ಚಿನಿಂದ ಹೊಡೆದು ಯುವಕನ ಬರ್ಬರ ಹತ್ಯೆ: ಕಾರಣ ನಿಗೂಢ - YOUTH MURDER IN DAVANAGERE - YOUTH MURDER IN DAVANAGERE

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಮಚ್ಚಿನಿಂದ ಹೊಡೆದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲಿಸಿದರು.
ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲಿಸಿದರು. (ETV Bharat)

By ETV Bharat Karnataka Team

Published : Jul 16, 2024, 11:20 AM IST

ದಾವಣಗೆರೆ: ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ನಡೆದಿದೆ. ಸಂತೋಷ (32) ಕೊಲೆಯಾದ ಯುವಕ. ಸಂತೆಬೆನ್ನೂರಿನ‌ ಪೆಟ್ರೋಲ್ ಬಂಕ್ ಬಳಿ ಹತ್ಯೆಗೈಯಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.‌

ತಡರಾತ್ರಿ ಸಂತೇಬೆನ್ನೂರಿನ ಬಾಡಾ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಯಾರೋ ದುಷ್ಕರ್ಮಿಗಳು ಸಂತೋಷನ ಮೇಲೆ ಮನಬಂದಂತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಸಂತೋಷ್ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ, ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ‌. ಆರೋಪಿಗಳಾಗಿ ಶೋಧ ನಡೆಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ಸಂತೋಷ್ ಗಾರೆ ಕೆಲಸ ಮಾಡುತ್ತಿದ್ದ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಸಂತೇಬೆನ್ನೂರು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ದಾವಣಗೆರೆ ಎಸ್ಪಿ ಉಮಾ ಪ್ರಶಾಂತ ಕೂಡ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತೆಬೆನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಾಸನ: ಮನೆ ಕಳ್ಳತನಕ್ಕೆ ಬಂದ ದುಷ್ಕರ್ಮಿಗಳಿಂದ ಮಹಿಳೆಯ ಕೊಲೆ ಯತ್ನ - Hassan Robbery Case

ABOUT THE AUTHOR

...view details