ಕರ್ನಾಟಕ

karnataka

ETV Bharat / state

ಬೆಂಗಳೂರು: ಕುಡಿದ ಮತ್ತಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾವು - YOUNG MAN DIES

ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ಯುವಕನೋರ್ವ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

YOUNG MAN DIES
ಪ್ರಕಾಶ್ (ETV Bharat)

By ETV Bharat Karnataka Team

Published : Jan 30, 2025, 4:55 PM IST

ಬೆಂಗಳೂರು:ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ಯುವಕ ಕುಡಿದ ಮತ್ತಿನಲ್ಲಿ ಅಚಾನಕ್ಕಾಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಪ್ರಕಾಶ್ (19) ಸಾವನ್ನಪ್ಪಿದ ಯುವಕ. ದೊಡ್ಡನೆಕ್ಕುಂದಿ ಮುಖ್ಯರಸ್ತೆ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ನಿನ್ನೆ ರಾತ್ರಿ ದುರ್ಘಟನೆ ನಡೆದಿದ್ದು, ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯಚೂರು ಮೂಲದ ಪ್ರಕಾಶ್ ಕುಟುಂಬ ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿತ್ತು. ತಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಕಟ್ಟಿಕೊಂಡಿದ್ದರು. ಮೃತ ಪ್ರಕಾಶ್ ಸ್ವಿಗ್ಗಿ ಕಂಪೆನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಕೆಲಸದ ನಿಮಿತ್ತ ಹೊರ ಹೋಗುವುದಾಗಿ ಮನೆಯಲ್ಲಿ ಹೇಳಿಬಂದು ದೊಡ್ಡನೆಕ್ಕುಂದಿ ಮುಖ್ಯರಸ್ತೆಯಲ್ಲಿ ಕಟ್ಟಡದ ಮೇಲೆ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದ. ಸ್ಥಳೀಯರ ನೆರವಿನೊಂದಿಗೆ ಕೂಡಲೇ ವೈದೇಹಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ವೇಳೆ ಜೊತೆಗಿದ್ದ ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಉದ್ದೇಶಪೂರ್ವಕವಾಗಿ ದುರ್ಘಟನೆ ಸಂಭವಿಸಿಲ್ಲ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ರಾಯಚೂರು ಕಾಲೇಜು ವಿದ್ಯಾರ್ಥಿನಿಯ ಭೀಕರ ಕೊಲೆ; ಆರೋಪಿ ಪೊಲೀಸರಿಗೆ ಶರಣು

ABOUT THE AUTHOR

...view details