ಕೇಂದ್ರ ವಿಭಾಗದ ಡಿಸಿಪಿ ಟಿ.ಹೆಚ್.ಶೇಖರ್ (ETV Bharat) ಬೆಂಗಳೂರು:ಹಳೆದ್ವೇಷ ಶಂಕೆ ಹಿನ್ನೆಲೆಯಲ್ಲಿ ಹಾಡಹಗಲೇ ಯುವಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಹಂತಕರು ಪರಾರಿಯಾಗಿರುವ ಘಟನೆ ಶೇಷಾದ್ರಿಪುರ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
27 ವರ್ಷದ ಅಜಿತ್ ಕೊಲೆಯಾದವ. ಬ್ಲಡ್ ಬ್ಯಾಂಕ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಜಿತ್ನನ್ನು ಗುರಿಯಾಗಿಸಿಕೊಂಡ ಆರೋಪಿಗಳು, ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ. ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೇಂದ್ರ ವಿಭಾಗದ ಡಿಸಿಪಿ ಟಿ.ಹೆಚ್.ಶೇಖರ್ ಮಾತನಾಡಿ, ''ಅಜಿತ್ ಕುಮಾರ್ ಎಂಬ 27 ವಯಸ್ಸಿನ ವ್ಯಕ್ತಿಯ ಕೊಲೆಯಾಗಿದೆ. ಈತ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ, ಜೈಲಿಗೆ ಹೋಗಿ ಬಂದಿದ್ದ. ಹಳೆ ದ್ವೇಷ ವಿಚಾರಕ್ಕಾಗಿ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ'' ಎಂದು ತಿಳಿಸಿದರು.
ಇದನ್ನೂ ಓದಿ:ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರಿಗೆ ಪೊಲೀಸರ ಶಾಕ್: ವರ್ಷದಲ್ಲಿ ದಾಖಲಾಗಬೇಕಿದ್ದ ಪ್ರಕರಣ ಆರೇ ತಿಂಗಳಲ್ಲಿ ದಾಖಲು - CASE AGAINST WHEELING