ಕರ್ನಾಟಕ

karnataka

ETV Bharat / state

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಆನೆ ದಾಳಿ: ಸಾವು - elephant attack - ELEPHANT ATTACK

ಕಾಲ್ನಡಿಗೆ ಮೂಲಕ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಆನೆ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

YOUNG WOMAN DIED  CHAMARAJANAGAR  MADAPPA HILL
ಯುವತಿ ಆನೆ ದಾಳಿಗೆ ಸಾವು

By ETV Bharat Karnataka Team

Published : Apr 10, 2024, 1:28 PM IST

ಚಾಮರಾಜನಗರ: ಪಾದಯಾತ್ರೆಯ ಮೂಲಕ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ಜರುಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹುಲ್ಲೇಗಾಳ ಗ್ರಾಮದ ಲಕ್ಷ್ಮಿ(36) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ದಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಿಂದ ಸುಮಾರು 20 ಕ್ಕೂ ಹೆಚ್ಚು ಜನರು ಗೂಡ್ಸ್ ವಾಹನದಲ್ಲಿ ತೆರಳುತ್ತಿದ್ದರು.

ಮಲೆಮಾದೇಶ್ವರ ಬೆಟ್ಟಕ್ಕೆ ತೆರಳುವಾಗ ತಾಳು ಬೆಟ್ಟದಲ್ಲಿ ಸುಮಾರು 15ಕ್ಕೂ ಹೆಚ್ಚು ಪಾದಯಾತ್ರೆಗಳು ಹೋಗುತ್ತಿರುವುದನ್ನು ಗಮನಿಸಿದ ಇವರು ಸಹ ಪಾದಯಾತ್ರೆಯ ಮೂಲಕ ಹೋಗುವುದಕ್ಕೆ ತೀರ್ಮಾನಿಸಿ ಅವರ ಜೊತೆಯಲ್ಲಿಯೇ ಪಾದಯಾತ್ರೆಗೆ ಹೊರಟಿದ್ದರು.

ಪಾದಯಾತ್ರೆಯ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಲಹಳ್ಳ ಸಮೀಪ ಲಕ್ಷ್ಮಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಲಕ್ಷ್ಮಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಂತರ ಗಾಬರಿಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಮೆರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತ ಶವವನ್ನು ಮಲೆ ಮಹದೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಮೃತರ ಸಹೋದರಿ ಪದ್ಮ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಓದಿ:ಛೇ ಎಂಥಾ ದುರ್ಘಟನೆ: ಬಾವಿಗೆ ಬಿದ್ದ ಬೆಕ್ಕಿನ ರಕ್ಷಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಐವರು - Five People Died

ABOUT THE AUTHOR

...view details