ಕರ್ನಾಟಕ

karnataka

ETV Bharat / state

ಚಾಮರಾಜನಗರ: ಅನೈತಿಕ ಸಂಬಂಧಕ್ಕಾಗಿ ಪೀಡನೆ, ಅತ್ತಿಗೆ ಒಪ್ಪದಿದ್ದಕ್ಕೆ ಅಣ್ಣನ ಕೊಲೆ - CHAMARAJANAGAR CRIME - CHAMARAJANAGAR CRIME

ಅನೈತಿಕ ಸಂಬಂಧಕ್ಕೆ ಅತ್ತಿಗೆ ಒಪ್ಪದಿದ್ದಕ್ಕೆ ಸ್ವಂತ ಅಣ್ಣನನ್ನೇ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ತಮ್ಮನಿಂದ ಅಣ್ಣನ ಕೊಲೆ
ತಮ್ಮನಿಂದ ಅಣ್ಣನ ಕೊಲೆ (ETV Bharat)

By ETV Bharat Karnataka Team

Published : Jun 2, 2024, 12:45 PM IST

ಚಾಮರಾಜನಗರ:ಅನೈತಿಕ ಸಂಬಂಧದ ವಿಚಾರಕ್ಕೆ ಗಲಾಟೆ ನಡೆದು ಒಡಹುಟ್ಟಿದ ಅಣ್ಣನನ್ನೇ ತಮ್ಮ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಗ್ರಾಮವೊಂದರಲ್ಲಿ ನಡೆದಿದೆ. ಕುಮಾರ್​ ತನ್ನ 45 ವರ್ಷದ ಅಣ್ಣನನ್ನು ಕೊಲೆ ಮಾಡಿರುವ ಆರೋಪಿ.

ಅತ್ತಿಗೆಗೆ ಮೈದುನ ಕುಮಾರ್ ನಿರಂತರವಾಗಿ ಅನೈತಿಕ ಸಂಬಂಧ ಇಟ್ಟುಕೊಳ್ಳುವಂತೆ ಪೀಡಿಸುತ್ತಿದ್ದನಂತೆ, ಇದೇ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಗಲಾಟೆ ಆಗಿ ಬೇರೆ ವಾಸವಾಗಿದ್ದರು. ಶನಿವಾರ ತಡರಾತ್ರಿ ಅಣ್ಣನ ಮನೆಗೆ ಬಂದ ಕುಮಾರ್, ನನ್ನ ಜೊತೆ ಸಂಬಂಧ ಇಟ್ಟುಕೊಳ್ಳದೇ ಬೇರೆಯವರ ಜೊತೆ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಜಗಳ ತೆಗೆದಿದ್ದಾನೆ. ಅಲ್ಲದೆ ತನಗೆ ಬುದ್ಧಿವಾದದ ಮಾತುಗಳನ್ನು ಹೇಳುತ್ತಿಯಾ ಎಂದು ಕುಮಾರ್​ ಚಾಕುವಿನಿಂದ ಇರಿದು ಅಣ್ಣನನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡ್ಲುಪೇಟೆ ಠಾಣೆ ಪೊಲೀಸರು ಆರೋಪಿ ಕುಮಾರನನ್ನು ಬಂಧಿಸಿದ್ದಾರೆ. ಅವರ ಅಣ್ಣನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಮೃತನ ಪತ್ನಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಮರಗಸಿ ಮಾಡುವ ವೇಳೆ ವಿದ್ಯುತ್ ತಂತಿ ತಾಗಿ ಮರದಲ್ಲೇ ಕಾರ್ಮಿಕ ಸಾವು - Laborer died in tree

ABOUT THE AUTHOR

...view details