ಹಾಸನ:ಹಳೆ ದ್ವೇಷದ ಹಿನ್ನೆಲೆಯಲ್ಲಿ ಕಿಡಿಗೇಡಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಸೋಮವಾರ ಸಂಜೆ ಮೃತಪಟ್ಟಿದ್ದಾನೆ. ನಗರದ ಹೊರವಲಯದ ಕೆಐಎಡಿಬಿ ವೃತ್ತದ ಬಳಿ ಘಟನೆ ನಡೆದಿತ್ತು. ಹಾಲಿನ ಡೈರಿ ನಡೆಸುತ್ತಿದ್ದ ನಾಗತವಳ್ಳಿ ಗ್ರಾಮದ ಸತೀಶ್ ಮೃತಪಟ್ಟ ಯುವಕ.
ಘಟನೆಯ ವಿವರ:ಸತೀಶ ಎಂದಿನಂತೆ ಲಾರಿಯಲ್ಲಿ ಬಂದ ಹಾಲು ಇಳಿಸುತ್ತಿದ್ದ. ಈ ಸಂದರ್ಭದಲ್ಲಿ ಸುತ್ತುವರೆದ ಕೆಲವು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆಗೈದು ಪರಾರಿಯಾಗಿದ್ದರು. ಹಲ್ಲೆ ನಡೆಯುತ್ತಿದ್ದರೂ ಸ್ಥಳದಲ್ಲಿದ್ದವರು ಮೂಕಪ್ರೇಕ್ಷಕರಾಗಿ ನಿಂತಿದ್ದರು. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತೀವ್ರ ರಕ್ತಸ್ರಾವವಾಗಿದ್ದರಿಂದ ಸತೀಶ್ ಸಂಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.