Aadhaar free Update: ಆಧಾರ್ ವಿವರಗಳನ್ನು ಉಚಿತವಾಗಿ ಅಪ್‌ಡೇಟ್ ಮಾಡಲು ಕೇಂದ್ರ ನೀಡಿದ್ದ ಗಡುವು ಇಂದಿಗೆ ಅಂತ್ಯಗೊಳ್ಳಲಿರುವ ಹಿನ್ನೆಲೆ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಗಡುವನ್ನು ಮತ್ತೊಮ್ಮೆ ವಿಸ್ತರಿಸುವುದಾಗಿ ಘೋಷಿಸಲಾಗಿದೆ.
UIDAI ತಮ್ಮ X ನಲ್ಲಿ ಈ ಕುರಿತು ಪೋಸ್ಟ್ ಮಾಡಲಾಗಿದೆ. ಇದನ್ನು ಡಿಸೆಂಬರ್ 14, 2024ರ ವರೆಗೆ ಹೆಚ್ಚಿಸಲಾಗುವುದು ಎಂದು ತಿಳಿದುಬಂದಿದೆ. ಇದರೊಂದಿಗೆ, ಆಧಾರ್ ಕಾರ್ಡ್‌ನಲ್ಲಿ ವಿಳಾಸವನ್ನು ಬದಲಾಯಿಸಲು ಬಯಸುವವರು ತಕ್ಷಣ ಅದನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಅಪ್‌ಡೇಟ್ ಮಾಡಿಕೊಳ್ಳಬಹುದಾಗಿದೆ.
ಯುಐಡಿಎಐ ನಿಯಮಗಳ ಪ್ರಕಾರ, ಪ್ರತಿ ಹತ್ತು ವರ್ಷಗಳಿಗೊಮ್ಮೆ ಆಧಾರ್‌ಗೆ ಸಂಬಂಧಿಸಿದ ವಿವರಗಳನ್ನು ಅಪ್‌ಡೇಟ್ ಮಾಡಬೇಕಾಗುತ್ತದೆ. ಇದಕ್ಕಾಗಿ, ಆಯಾ ಪುರಾವೆ ದಾಖಲೆಗಳನ್ನು ಸಲ್ಲಿಸಬೇಕು. 'ಮೈ ಆಧಾರ್' ಪೋರ್ಟಲ್ ಮೂಲಕ ಮಾತ್ರ ಉಚಿತ ಸೇವೆಗಳು ಲಭ್ಯವಿವೆ. ಹೆಸರು, ಹುಟ್ಟಿದ ದಿನಾಂಕ, ವಿಳಾಸ ಮುಂತಾದ ಬದಲಾವಣೆಗಳನ್ನು ಉಚಿತವಾಗಿ ಮಾಡಿಕೊಳ್ಳಬಹುದಾಗಿದೆ. ಉಚಿತ ಆಧಾರ್ ಅವಧಿ ಮುಗಿದ ನಂತರ ಕೇಂದ್ರಗಳಲ್ಲಿ ರೂ.50 ಪಾವತಿಸಿ ಮೊದಲಿನಂತೆ ಅಪ್‌ಡೇಟ್ ಮಾಡಿಕೊಳ್ಳಬೇಕಾಗುತ್ತದೆ.
ನಾವಿಲ್ಲಿ ನಿಮಗೆ ಹಂತ ಹಂತವಾಗಿ ಆಧಾರ್ ಕಾರ್ಡ್ ನವೀಕರಿಸುವ ಸುಲಭ ಮಾರ್ಗವನ್ನು ಹೇಳುತ್ತೇವೆ. ಅದನ್ನು ಅನುಸರಿಸುವ ಮೂಲಕ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ಅಪ್‌ಡೇಟ್ ಮಾಡಿಕೊಳ್ಳಬಹುದು.
ಹಂತ 1:myAadhaar ಪೋರ್ಟಲ್‌ಗೆ ಹೋಗಿ.
ಹಂತ 2:Enter ಆಯ್ಕೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಸಂಖ್ಯೆ, ಕ್ಯಾಪ್ಚ ಕೋಡ್ ನಮೂದಿಸಿ. 'ಸೆಂಡ್ OTP' ಆಯ್ಕೆ ಕ್ಲಿಕ್ ಮಾಡಿ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ OTP ಸ್ವೀಕರಿಸಿದ ನಂತರ, ಅದನ್ನು ನಮೂದಿಸಿ ಮತ್ತು ಆಯ್ಕೆಯನ್ನು ಕ್ಲಿಕ್ಕಿಸಿ.