PM Modi Congratulates ISRO: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಇಸ್ರೋ ತನ್ನ ಬಾಹ್ಯಾಕಾಶ ಡಾಕಿಂಗ್ ಪ್ರಯೋಗದ ಅಡಿಯಲ್ಲಿ ಉಪಗ್ರಹಗಳನ್ನು ಸಂಪರ್ಕಿಸುವಲ್ಲಿ ಯಶಸ್ಸು ಸಾಧಿಸಿ ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ. ಈ ಐತಿಹಾಸಿಕ ಕ್ಷಣದ ಬಗ್ಗೆ ಪ್ರಧಾನಿ ಮೋದಿ ಸಹ ಸಂತಸ ವ್ಯಕ್ತಪಡಿಸಿದ್ದು, ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಇಸ್ರೋದ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಉಪಗ್ರಹಗಳ ಬಾಹ್ಯಾಕಾಶ ಡಾಕಿಂಗ್‌ನ ಯಶಸ್ವಿ ಪ್ರದರ್ಶನಕ್ಕಾಗಿ ನಮ್ಮ ಇಸ್ರೋ ವಿಜ್ಞಾನಿಗಳು ಮತ್ತು ಇಡೀ ಬಾಹ್ಯಾಕಾಶ ಬಂಧುತ್ವಕ್ಕೆ ಅಭಿನಂದನೆಗಳು. ಮುಂಬರುವ ವರ್ಷಗಳಲ್ಲಿ ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಯಾತ್ರೆಗಳಿಗೆ ಇದು ಒಂದು ಪ್ರಮುಖ ಹೆಜ್ಜೆಯಾಗಿರುವುದು ಗಮನಾರ್ಹ ಎಂದು ಎಕ್ಸ್ ಪೋಸ್ಟ್ನಲ್ಲಿ ಬರೆದಿದ್ದಾರೆ.
ಇದಕ್ಕೂ ಮೊದಲು ಇಸ್ರೋ ಎರಡು ಬಾರಿ ಡಾಕಿಂಗ್ ಪ್ರಕ್ರಿಯೆ ಕೈಗೊಂಡಿತ್ತು. ಆದರೆ ತಾಂತ್ರಿಕ ಸಮಸ್ಯೆಗಳಿಂದಾಗಿ ಜನವರಿ 7 ಮತ್ತು 9 ರಂದು ಅದು ಡಾಕಿಂಗ್ ಪ್ರಕ್ರಿಯೆ ಸಾಧ್ಯವಾಗಲಿಲ್ಲ. ಬಳಿಕ ಜನವರಿ 12 ರಂದು ಡಾಕಿಂಗ್ ಪ್ರಯೋಗದ ಸಮಯದಲ್ಲಿ ಇಸ್ರೋ ಎರಡು ಉಪಗ್ರಹಗಳನ್ನು ಮೂರು ಮೀಟರ್‌ಗಿಂತ ಕಡಿಮೆ ದೂರಕ್ಕೆ ತರುವಲ್ಲಿ ಯಶಸ್ವಿಯಾಯಿತು.