Rahul Gandhi On AI:ಕಾಂಗ್ರೆಸ್ ಮುಖಂಡ ಹಾಗೂ ಸಂಸದ ರಾಹುಲ್ ಗಾಂಧಿ ಮೂರು ದಿನಗಳ ಭೇಟಿಗಾಗಿ ಅಮೆರಿಕದಲ್ಲಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತದ ನಿರುದ್ಯೋಗ ಸಮಸ್ಯೆ ಕುರಿತು ಪ್ರಸ್ತಾಪಿಸಿದರು.
ಪಾಶ್ಚಿಮಾತ್ಯ ದೇಶಗಳಲ್ಲಿ ಉದ್ಯೋಗದ ಸಮಸ್ಯೆ ಇದೆ. ಭಾರತದಲ್ಲೂ ಈ ಸಮಸ್ಯೆ ಇದೆ. ಆದರೆ ಪ್ರಪಂಚದ ಹಲವು ದೇಶಗಳಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ಚೀನಾ, ವಿಯೆಟ್ನಾಂನಲ್ಲಿ ಈ ಸಮಸ್ಯೆ ಇಲ್ಲ. ನೀವು 1940, 1950 ಮತ್ತು 60ರ ದಶಕಗಳಲ್ಲಿ ಅಮೆರಿಕ ಜಾಗತಿಕ ಉತ್ಪಾದನೆಯ ಕೇಂದ್ರವಾಗಿತ್ತು. ಈಗ ಅಮೆರಿಕ, ಯುರೋಪ್ ಮತ್ತು ಭಾರತ ಉತ್ಪಾದನೆಯ ಕಲ್ಪನೆಯನ್ನು ಕೈಬಿಟ್ಟಿದೆ ಮತ್ತು ಅದನ್ನು ಚೀನಾಕ್ಕೆ ಹಸ್ತಾಂತರಿಸಿದ್ದಾರೆ. ಉತ್ಪಾದನೆ ಉದ್ಯೋಗವನ್ನು ಸೃಷ್ಟಿಸುತ್ತದೆ. ಬಳಕೆಯ ಜೊತೆಗೆ ಉತ್ಪಾದನೆಯ ಬಗ್ಗೆಯೂ ನಾವು ಯೋಚಿಸಬೇಕು ಎಂದು ಸಲಹೆ ನೀಡಿದರು.
ಕೃತಕ ಬುದ್ಧಿಮತ್ತೆ ಕುರಿತು ಮಾತನಾಡಿದ ಅವರು, ಪ್ರತಿ ಬಾರಿ ಹೊಸ ತಂತ್ರಜ್ಞಾನ ಬಂದಾಗ ಅದು ಉದ್ಯೋಗಗಳನ್ನು ಕಸಿದುಕೊಳ್ಳುತ್ತದೆ ಎಂದು ವಾದಿಸಲಾಗುತ್ತದೆ. ಕಂಪ್ಯೂಟರ್‌ಗಳು, ಎಟಿಎಂಗಳು ಸೇರಿದಂತೆ ಇನ್ನಿತರ ತಂತ್ರಜ್ಞಾನಗಳು ಅಭಿವೃದ್ಧಿಗೊಂಡಾಗ ಉದ್ಯೋಗಗಳನ್ನು ಕಸಿದುಕೊಳ್ಳುತ್ತವೆ ಎಂದೇ ಹೇಳಲಾಗಿತ್ತು. ಆದರೆ ಇವೆಲ್ಲ ವಿಭಿನ್ನ ರೀತಿಯ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಇವುಗಳಲ್ಲಿ ಕೆಲವು ಸಮಸ್ಯೆಗಳಿರಬಹುದು, ಆದರೆ ಅದರ ಸರಿಯಾದ ಬಳಕೆ ಉದ್ಯೋಗಾವಕಾಶವನ್ನು ಹೆಚ್ಚಿಸುತ್ತದೆ ಎಂದರು.