ಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯ, ಬೆಂಗಳೂರು ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ಇವರ ವತಿಯಿಂದ ಆಗಸ್ಟ್ 23ರ ರಂದು ಬೆಂಗಳೂರು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುವುದು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜವಾಹರ್ ಲಾಲ್ ನೆಹರು ತಾರಾಲಯದಲ್ಲಿ ಬೆಳಗ್ಗೆ 10 ಗಂಟೆಗೆ ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ನೆರವೇರಿಸಲಿದ್ದಾರೆ ಎಂದು ಜವಾಹರಲಾಲ್ ನೆಹರು ತಾರಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗಾಗಿ ಬಾಹ್ಯಾಕಾಶ ಕುರಿತು ಹಲವಾರು ರೋಮಾಂಚನಕಾರಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. 7, 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪಿಕ್ ಮತ್ತು ಸ್ಪೀಕ್ ಹಾಗೂ 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಗೆ ಜಿಗ್ ಸಾ ಫಜಲ್ ಚಟುವಟಿಕೆ ಹಾಗೂ 12 ವರ್ಷ ಮೇಲ್ಪಟ್ಟವರಿಗೆ ವಾಕ್ ಇನ್ ಕ್ವಿಜ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://forms.gle/io2ywsCeqt2KNyd88 ರಲ್ಲಿ ನೋಂದಣಿಯನ್ನು ಮಾಡಿಕೊಳ್ಳುಬೇಕು ಎಂದು ಮಾಹಿತಿ ನೀಡಿದೆ.