ಬಿಎಂಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಪ್ರಾಣ ಕಳೆದುಕೊಂಡ ಬೈಕ್ ಸವಾರ - ಬಿಎಂಟಿಸಿ ಬಸ್
Published : Mar 3, 2024, 4:00 PM IST
ಬೆಂಗಳೂರು : ಬಿಎಂಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರವೊಬ್ಬ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಸಾವನ್ನಪ್ಪಿರುವ ಘಟನೆ ಮಾರ್ಚ್ 1ರಂದು ಕೆ.ಎಸ್.ಲೇಔಟ್ ಠಾಣಾ ವ್ಯಾಪ್ತಿಯ ಟಿ.ಆರ್ ಆಸ್ಪತ್ರೆ ಹತ್ತಿರದ ಆಸ್ಪೀರ ಅಪಾರ್ಟ್‌ಮೆಂಟ್ ಬಳಿ ನಡೆದಿದೆ. ಮೃತರನ್ನು ವೈಜನಾಥ್ (31) ಎಂದು ಗುರುತಿಸಲಾಗಿದೆ.
ಬ್ಯಾಂಕ್‌ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ವೈಜನಾಥ್ ಮಾರ್ಚ್ 1ರಂದು ಮಧ್ಯಾಹ್ನ ಬ್ರಿಗೇಡ್ ಮಿಲೆನಿಯಂ ಸಿಗ್ನಲ್ ಕಡೆಯಿಂದ ಕೆ.ಬಿ ಸರ್ಕಲ್ ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ವೈಜನಾಥ್ ಅವರ ದ್ವಿಚಕ್ರ ವಾಹನಕ್ಕೆ ಬಸ್ ತಗುಲಿ ಕೆಳಕ್ಕೆ ಬಿದ್ದಿದ್ದಾರೆ. ಪರಿಣಾಮ ಬಸ್ ಅವರ ಮೇಲೆ ಹರಿದಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ಅಪಾರ್ಟ್‌ಮೆಂಟ್ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ಕೆ.ಎಸ್.ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ವೈಜನಾಥ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಓದಿ: ಆಂಧ್ರ ರೈಲು ದುರಂತಕ್ಕೆ ಚಾಲಕ, ಸಹಾಯಕ ಚಾಲಕನ ಕ್ರಿಕೆಟ್ ಹುಚ್ಚು ಕಾರಣ: ಸಚಿವ ಅಶ್ವಿನಿ ವೈಷ್ಣವ್