ಕರ್ನಾಟಕ

karnataka

ETV Bharat / videos

ರಸ್ತೆ ಬದಿ ನಿಲ್ಲಿಸಿದ್ದ ಸಿಎನ್‌ಜಿ ಕಾರು ಅಗ್ನಿಗಾಹುತಿ: ಚಾಲಕ ಪಾರು - CNG Car Caught Fire - CNG CAR CAUGHT FIRE

By ETV Bharat Karnataka Team

Published : Sep 20, 2024, 2:28 PM IST

ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಸಿಎನ್‌ಜಿಚಾಲಿತ ಕಾರು ಬೆಂಕಿಗೆ ಆಹುತಿಯಾದ ಘಟನೆ ಗುರುವಾರ ತಡರಾತ್ರಿ ವೈಯಾಲಿ ಕಾವಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಲಸ ಮುಗಿಸಿ ಬಂದಿದ್ದ ಕ್ಯಾಬ್ ಚಾಲಕ ತಡರಾತ್ರಿ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ, ಅದರಲ್ಲೇ ಮಲಗಿದ್ದ. ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ‌ ಇದ್ದಕ್ಕಿದ್ದ ಹಾಗೆ ಕಾರಿನ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮಲಗಿದ್ದ ಚಾಲಕ ಕಾರಿನಿಂದ ಇಳಿದು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ‌ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತನ್ನ ಕಾರಿಗೆ ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರಬಹುದು ಎಂದು ಚಾಲಕ ಆರೋಪಿಸಿದ್ದಾನೆ. ಘಟನೆಯಲ್ಲಿ ಕಾರು ಭಾಗಶಃ ಬೆಂಕಿಗೆ ಆಹುತಿಯಾಗಿದೆ. ಘಟನೆಯ ಕುರಿತು ವೈಯಾಲಿ ಕಾವಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಅಂಗಡಿ, ವಾಹನಗಳಿಗೆ ಬೆಂಕಿ, ಇಬ್ಬರು ಪೊಲೀಸರಿಗೆ ಗಾಯ - Stone Pelting In Nagamangala

ABOUT THE AUTHOR

...view details