ಕಾರವಾರ: ಪ್ರವಾಸಕ್ಕೆ ಬಂದ ವಿದ್ಯಾರ್ಥಿ ಸಮುದ್ರದ ಅಲೆಗೆ ಸಿಲುಕಿ ಸಾವು, ಓರ್ವನ ರಕ್ಷಣೆ - STUDENT DIES
Published : Oct 7, 2024, 10:09 AM IST
ಕಾರವಾರ: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಸಮುದ್ರದಲ್ಲಿ ಈಜಾಡುತ್ತಿರುವಾಗ ಅಲೆಗೆ ಕೊಚ್ಚಿ ಹೋಗಿ ಓರ್ವ ಮೃತಪಟ್ಟು, ಇನ್ನೋರ್ವನನ್ನು ರಕ್ಷಣೆ ಮಾಡಿರುವ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಬೀಚ್ನಲ್ಲಿ ನಡೆದಿದೆ.
ಬೆಂಗಳೂರಿನ ಜಾಲಹಳ್ಳಿ ಕ್ರಾಸಿನ ವಿದ್ಯಾ ಸೌದ್ಯ ಪಿಯು ಕಾಲೇಜಿನ ಸುಮಾರು 200 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಆಗಮಿಸಿದ್ದರು. ಈ ವೇಳೆ ಸಮುದ್ರದಲ್ಲಿ ಈಜಾಡಲು ಇಳಿದಿದ್ದ ವಿದ್ಯಾರ್ಥಿಗಳ ಪೈಕಿ ಇಬ್ಬರು ಅಲೆಗೆ ಕೊಚ್ಚಿ ಹೋಗಿದ್ದರು. ಈ ಬಗ್ಗೆ ಸ್ಥಳದಲ್ಲಿದ್ದ ಇತರರು ಕೂಗಿಕೊಂಡಾಗ ತಕ್ಷಣ ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ನೇತ್ರಾಣಿ ಅಡ್ವೆಂಚರ್ಸ್ ಸ್ಪೋರ್ಟ್ಸ್ ಸಿಬ್ಬಂದಿ ಧನುಷ್ ಎಂಬ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಬೆಂಗಳೂರಿನ ಗೌತಮ್ (17) ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಾಸನ: ವಸತಿ ಗೃಹದಲ್ಲಿ ಮುಖ್ಯ ಶಿಕ್ಷಕ ಆತ್ಮಹತ್ಯೆ
ಇದನ್ನೂ ಓದಿ: ಪ್ರಯಾಣಿಕರಿದ್ದ ದೋಣಿ ಮುಳುಗಿ 78 ಮಂದಿ ಸಾವು: 10 ಮಂದಿಯ ರಕ್ಷಣೆ - 78 people died when boat capsized