ದಾವಣಗೆರೆ: ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು, ನಾಲ್ವರಿಗೆ ಗಾಯ - ಬೈಕ್ಗಳು ಮುಖಾಮುಖಿ ಡಿಕ್ಕಿ
Published : Mar 1, 2024, 2:58 PM IST
ದಾವಣಗೆರೆ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದ ಸಮೀಪ ಕಳೆದ ರಾತ್ರಿ ನಡೆದಿದೆ. ಮೃತರನ್ನು ಕೆ.ರಾಮೇನಹಳ್ಳಿ ಗ್ರಾಮದ ರಾಮಪ್ಪ (55) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅತೀ ವೇಗದಲ್ಲಿದ್ದ ಎರಡು ಬೈಕ್ಗಳು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಚನ್ನಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿಯ ರಭಸಕ್ಕೆ ಬೆಂಕಿ ಉಂಟಾಗಿ ಒಂದು ಬೈಕ್ ಸುಟ್ಟು ಕರಕಲಾಗಿದೆ. ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ಈಗಾಗಲೇ ಮನವಿ ಮಾಡಿದ್ದಾರೆ. ಆದರೆ ಯಾವುದೇ ಸೂಚನಾ ಫಲಕಗಳನ್ನು ಈವರೆಗೆ ಅಳವಡಿಸಿಲ್ಲ ಎಂದು ಜನರು ದೂರಿದ್ದಾರೆ.
ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘನೆ: ಸವಾರರ ಮನೆಗೆ ಕ್ಯೂ ಆರ್ ಕೋಡ್ ಸಹಿತ ನೋಟಿಸ್