ಕರ್ನಾಟಕ

karnataka

ETV Bharat / videos

ಪಾಕ್ ಪರ ಘೋಷಣೆ ಕೂಗಿದ್ದು ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ - CM Siddaramaiah

By ETV Bharat Karnataka Team

Published : Feb 28, 2024, 2:51 PM IST

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಂಗಳವಾರ ಸಂಜೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರತಿಕ್ರಿಯೆ ನೀಡಿದರು. ''ಎಫ್ಎಸ್ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಗಂಭೀರ ಕ್ರಮ ಕೈಗೊಳ್ಳಲಾಗುವುದು. ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ" ಎಂದರು.

ವಿಧಾನಸೌಧದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ''ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು'' ಎಂದು ಹೇಳಿದರು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ''ಘೋಷಣೆ ಕೂಗುವವರಿಗೆ ಇಲ್ಲಿಯಾದರೇನು?, ನಿಜವಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು'' ಎಂದು ತಿಳಿಸಿದರು.

ಪರಿಷತ್​ನಲ್ಲಿ ಬಿಜೆಪಿ, ಕಾಂಗ್ರೆಸ್ ಜಟಾಪಟಿ: ಇದೇ ವಿಚಾರವಾಗಿ ವಿಧಾನ ಪರಿಷತ್ ಕಲಾಪದಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ಏಕವಚನದಲ್ಲಿ ಬೈದಾಡಿಕೊಂಡು ಕೈ ಕೈ ಮಿಲಾಯಿಸುವ ಸನ್ನಿವೇಶ ಸೃಷ್ಟಿಯಾಯಿತು. ಕೋಲಾಹಲ ಜೋರಾಗುತ್ತಿದ್ದಂತೆ ಕಲಾಪವನ್ನು ಕೆಲಹೊತ್ತು ಮುಂದೂಡಲಾಯಿತು. ಹೀಗಿದ್ದರೂ ಸಭಾಪತಿ ಪೀಠದೆದುರು ಬಿಜೆಪಿ ಹಾಗು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿ: ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಪಾಕಿಸ್ತಾನದ ಪರ ಘೋಷಣೆ ಆರೋಪ ಪ್ರಕರಣ: 10 ನಿಮಿಷ ಸದನ ಮುಂದೂಡಿಕೆ

ABOUT THE AUTHOR

...view details