ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಟಿ - ನೇರ ಪ್ರಸಾರ
Published : Mar 16, 2024, 11:43 AM IST
|Updated : Mar 16, 2024, 11:53 AM IST
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಗರದ ಖಾಸಗಿ ಹೊಟೇಲ್ನಲ್ಲಿ ಕರೆದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಸುದ್ದಿಗೋಷ್ಟಿಯ ನೇರ ಪ್ರಸಾರ ಇಲ್ಲಿದೆ..ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ. ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್ ಇಂದು ನಾಲ್ಕು ಮತ್ತು ಐದನೇ ಗ್ಯಾರಂಟಿ ಯೋಜನೆ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಲಿದ್ದಾರೆ. ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಬಡ ಕುಟುಂಬದ ಒಬ್ಬ ಮಹಿಳೆಗೆ ವಾರ್ಷಿಕ 1 ಲಕ್ಷ ರೂ.ಗಳ ಆರ್ಥಿಕ ನೆರವು ಮತ್ತು ಕೇಂದ್ರ ಸರ್ಕಾರಿ ನೌಕರಿಗಳ ಎಲ್ಲ ಹೊಸ ನೇಮಕಾತಿಗಳಲ್ಲಿ ಶೇ.50ರಷ್ಟು ಮಹಿಳಾ ಕೋಟಾ ನೀಡುವುದಾಗಿ ಇತ್ತೀಚೆಗೆ ಕಾಂಗ್ರೆಸ್ ಘೋಷಿಸಿತ್ತು. ಜೊತೆಗೆ ಈ ಮುನ್ನ 'ಸಹಭಾಗಿತ್ವದ ನ್ಯಾಯ', 'ರೈತ ನ್ಯಾಯ' ಮತ್ತು 'ಯುವ ನ್ಯಾಯ' ಎಂಬ ಘೋಷಣೆಗಳನ್ನು ಪ್ರಕಟಿಸಿತ್ತು. ಈಗಾಗಲೇ ಕಾಂಗ್ರೆಸ್ ಮಹಿಳಾ ನ್ಯಾಯ ಗ್ಯಾರಂಟಿ ಅಡಿಯಲ್ಲಿ 5 ಘೋಷಣೆಗಳನ್ನು ಮಾಡಿದೆ. ಇವುಗಳಲ್ಲಿ ಮಹಾಲಕ್ಷ್ಮಿ ಗ್ಯಾರಂಟಿ, ಅರ್ಧದಷ್ಟು ಜನಸಂಖ್ಯೆ- ಪೂರ್ಣ ಹಕ್ಕು, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ ಮತ್ತು ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್ ಸೇರಿವೆ. ಈ ಮೊದಲು ಭಾಗೀದಾರ ನ್ಯಾಯ, ರೈತ ನ್ಯಾಯ, ಯುವ ನ್ಯಾಯ ಘೋಷಣೆ ಮಾಡಿದೆ. ಈ ಗ್ಯಾರಂಟಿ ಯೋಜನೆಗಳು ಕೇವಲ ಖಾಲಿ ಭರವಸೆಗಳು ಮತ್ತು ಹೇಳಿಕೆಗಳಲ್ಲ ನಾವು ಅವುಗಳನ್ನು ಜಾರಿ ಮಾಡೇ ಮಾಡುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಕಾರ್ಜುನ ಖರ್ಗೆ ಈಗಾಗಲೇ ತಿಳಿಸಿದ್ದಾರೆ.
Last Updated : Mar 16, 2024, 11:53 AM IST