ತುಮಕೂರು: ವಿಜೃಂಭಣೆಯಿಂದ ಜರುಗಿದ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ - ರಥೋತ್ಸವ ವಿಡಿಯೋ
Published : Feb 16, 2024, 7:15 PM IST
ತುಮಕೂರು: ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿಯಲ್ಲಿ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ಜರುಗಿತು. ಬ್ರಹ್ಮರಥೋತ್ಸವ ಅಂಗವಾಗಿ ದೇವರಿಗೆ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಹೋಮ ಹವನಗಳನ್ನು ಅರ್ಚಕರು ನೆರವೇರಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು.
ಇದಕ್ಕೂ ಮುನ್ನ, ಕೊರಟಗೆರೆ ತಾಲೂಕಾಡಳಿತ ಹಾಗೂ ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತಾದಿಗಳ ಸಹಕಾರದಲ್ಲಿ ದೇವಸ್ಥಾನ ಹಾಗೂ ರಥೋತ್ಸವಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಆಂಜನೇಯ, ಶ್ರೀರಾಮ, ಲಕ್ಷ್ಮಣ, ಸೀತೆಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ರಥ ಎಳೆಯುವಾಗ ಜೈ ಶ್ರೀರಾಮ್ ಎಂದು ಭಕ್ತಾದಿಗಳು ಜಯಘೋಷ ಕೂಗಿದರು. ಭಕ್ತರಿಗೆ ವಿಶೇಷ ಭೋಜನದ ವ್ಯವಸ್ಥೆ ಕಲ್ಪಿಸಲಾಗಿತ್ತು.
"ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಯಶಸ್ವಿಯಾಗಿ ನಡೆದಿದೆ. ಮಹೋತ್ಸವದ ಸಿದ್ಧತೆಗಾಗಿ ಪಿಡಬ್ಲ್ಯೂ ಇಲಾಖೆ ಮತ್ತು ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಗ್ರಾಮ ಪಂಚಾಯಿತಿ ವತಿಯಿಂದ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು" ಎಂದು ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಹೇಳಿದರು.
ಇದನ್ನೂ ಓದಿ: ಸುತ್ತೂರು ಜಾತ್ರೆ; ಅದ್ಧೂರಿಯಾಗಿ ನೆರವೇರಿದ ರಥೋತ್ಸವ - ವಿಡಿಯೋ