ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ಅಯೋಧ್ಯೆಯಿಂದ ನೇರಪ್ರಸಾರ - ಪ್ರಧಾನಿ ನರೇಂದ್ರ ಮೋದಿ
Published : Jan 22, 2024, 9:00 AM IST
|Updated : Jan 22, 2024, 3:32 PM IST
Ayodhya Ram Mandir LIVE: ಅಯೋಧ್ಯೆಯಲ್ಲಿ ಬಾಲ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪೂರ್ವಭಾವಿ ವಿಧಿವಿಧಾನಗಳು ಜನವರಿ 16ರಂದು ಆರಂಭವಾಗಿ ಭಾನುವಾರ ಮುಕ್ತಾಯಗೊಂಡಿವೆ. ಈ ಆರು ದಿನಗಳ ಕಾಲ ನಡೆದ ವಿವಿಧ ಧಾರ್ಮಿಕ ಕೈಂಕರ್ಯಗಳ ನಂತರ ಇಂದು ಪ್ರಾಣ ಪ್ರತಿಷ್ಠಾಪನೆಯ ಮುಖ್ಯ ಕಾರ್ಯಕ್ರಮ ನಡೆಯಿತು. ಪ್ರತಿಷ್ಠಾಪನೆ ಕಾರ್ಯಕ್ರಮವು ಮಧ್ಯಾಹ್ನ 12.20ಕ್ಕೆ ಆರಂಭವಾಗಿ 1 ಗಂಟೆಗೆ ಮುಕ್ತಾಯವಾಯಿತು.
ವಿಶ್ವದಾದ್ಯಂತ ಕೋಟ್ಯಂತರ ಜನರ ಪ್ರತ್ಯಕ್ಷ ಮತ್ತು ಪರೋಕ್ಷ ವೀಕ್ಷಣೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಬಾಲರಾಮನ ಮೂರ್ತಿಯನ್ನು ಲೋಕಾರ್ಪಣೆಗೊಳಿಸಿದರು. ಈ ಹಿನ್ನೆಲೆಯಲ್ಲಿ ಅಯೋಧ್ಯೆ ಸೇರಿದಂತೆ ದೇಶ, ವಿದೇಶಗಳಲ್ಲಿ ರಾಮೋತ್ಸಾಹ ಎದ್ದು ಕಾಣುತ್ತಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ದೇಶ ಮತ್ತು ವಿದೇಶಗಳಿಂದ ಆಗಮಿಸಿದ 8,000ಕ್ಕೂ ಹೆಚ್ಚು ಅತಿಥಿಗಳು ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ರಾಮನ ಭಕ್ತಿ ಮತ್ತು ಉತ್ಸಾಹ ಎಲ್ಲೆಡೆ ಗೋಚರಿಸುತ್ತಿದೆ. ವಿವಿಧ ಮಠಗಳ ಸ್ವಾಮೀಜಿಗಳು, ವಿವಿಧ ಚಿತ್ರರಂಗಗಳ ಗಣ್ಯರು ಈ ಶುಭ ಘಳಿಗೆಗೆ ಸಾಕ್ಷಿಯಾದರು.
ಶ್ರೀರಾಮ ಜನ್ಮಭೂಮಿ ಕ್ಷೇತ್ರ ಟ್ರಸ್ಟ್ ಪ್ರಾಣ ಪ್ರತಿಷ್ಠಾಪನೆಗಾಗಿ ಸಕಲ ವ್ಯವಸ್ಥೆಗಳನ್ನು ಮಾಡಲಾಗಿತ್ತು. ದೇವಸ್ಥಾನವನ್ನು ಅತ್ಯಾಕರ್ಷಕವಾಗಿ ಅಲಂಕರಿಸಲಾಗಿದೆ. ಅಯೋಧ್ಯೆ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಇದನ್ನೂ ಓದಿ: ಅಯೋಧ್ಯೆಯಿಂದ ಭಾರತದ ಪ್ರವಾಸೋದ್ಯಮಕ್ಕೆ ಉತ್ತೇಜನ: ವರದಿ