ಕರ್ನಾಟಕ

karnataka

ETV Bharat / videos

LIVE: ಬೆಳಗಾವಿ ಅಧಿವೇಶನ; ವಿಧಾನಸಭೆಯಲ್ಲಿ ಇಂದೂ ಕಾವೇರಿದ ಚರ್ಚೆ - WINTER SESSION

By ETV Bharat Karnataka Team

Published : Dec 17, 2024, 11:03 AM IST

Updated : Dec 17, 2024, 2:09 PM IST

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ಚಳಿಗಾಲದ ಅಧಿವೇಶನದ 6ನೇ ದಿನದ ವಿಧಾನಸಭೆಯ ಕಲಾಪ ನಡೆಯುತ್ತಿದೆ. ಸದನದಲ್ಲಿ ಇದುವರೆಗೆ ವಕ್ಫ್ ಆಸ್ತಿ ವಿಚಾರ, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್​ ಸೇರಿದಂತೆ ಹಲವು ವಿಷಯಗಳು ಭಾರಿ ಗದ್ದಲ ಎಬ್ಬಿಸಿವೆ. ಲಾಠಿ ಚಾರ್ಜ್​ ಖಂಡಿಸಿ ಬಿಜೆಪಿ ಶಾಸಕರು ಗುರುವಾರ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಈಗಲೂ ಸಹ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರೆದಿದೆ. ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರಿಂದ 150 ಕೋಟಿ ರೂ. ಆಮಿಷ ಆರೋಪ ವಿಚಾರವು ಸೋಮವಾರ ಕಾಂಗ್ರೆಸ್ - ಬಿಜೆಪಿ ಸದಸ್ಯರ ನಡುವೆ ಜಟಾಪಟಿಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಬಿ.ವೈ.ವಿಜಯೇಂದ್ರ, ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮನ್ನು ಮತ್ತು ತಮ್ಮ ಕುಟುಂಬವನ್ನು ರಕ್ಷಿಸಲು ಬೇರೆಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು. ವಿಧಾನಸಭೆ ಕಲಾಪದ ನೇರಪ್ರಸಾರ ವೀಕ್ಷಿಸಿ.
Last Updated : Dec 17, 2024, 2:09 PM IST

ABOUT THE AUTHOR

...view details