LIVE:ಮೈಸೂರಿನಲ್ಲಿ ಬಿಜೆಪಿ - ಜೆಡಿಎಸ್ ಮೈಸೂರು ಚಲೋ ಸಮಾರೋಪ - BJP JDS PADAYATRA CONCLUDED PGM - BJP JDS PADAYATRA CONCLUDED PGM
Published : Aug 10, 2024, 1:18 PM IST
|Updated : Aug 10, 2024, 4:21 PM IST
ಮೈಸೂರು: ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಮೈತ್ರಿ ಪಕ್ಷಗಳು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಮೈಸೂರು ತಲುಪಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮುಂದಾಳತ್ಮವದಲ್ಲಿ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುವಾಗ ಮಾರ್ಗದಲ್ಲಿ ಹಲವೆಡೆ ಸಮಾವೇಶಗಳು ನಡೆದಿವೆ. ಕಾರ್ಯಕ್ರಮದ ಬೃಹತ್ ವೇದಿಕೆ ಹಾಗೂ ಮೈತ್ರಿ ನಾಯಕರ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಕಳೆದ ಶನಿವಾರ ಬೆಂಗಳೂರಿನಿಂದ ಆರಂಭಗೊಂಡ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್‌ನ ಜನಾಂದೋಲನ ಸಮಾವೇಶಕ್ಕೆ ಉತ್ತರ ನೀಡಲು ಮೈತ್ರಿ ಪಕ್ಷಗಳ ನಾಯಕರು ಸಜ್ಜಾಗಿದ್ದಾರೆ. ಸಮಾರಂಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಮೈತ್ರಿ ಪಕ್ಷಗಳ ಹಿರಿಯ ನಾಯಕರುಗಳು ಇದ್ದಾರೆ. ಈ ಪಾದಯಾತ್ರೆಗೆ ಪ್ರತಿಯಾಗಿ ಶುಕ್ರವಾರ ಇದೇ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಜನಾಂದೋಲನ ಸಮಾವೇಶ ನಡೆಸಿತ್ತು.
Last Updated : Aug 10, 2024, 4:21 PM IST