ಮನೆ ಬೀಗ ಮುರಿದು 1ಕೆಜಿ ಬೆಳ್ಳಿ 30 ಗ್ರಾಂ ಚಿನ್ನ ಕದ್ದೊಯ್ದ ಕಳ್ಳರು - ಮನೆ ಕಳುವು
Published : Jan 23, 2024, 8:54 PM IST
ನೆಲಮಂಗಲ: ಮನೆಗೆ ಬೀಗ ಹಾಕಿ ದೇವಸ್ಥಾನಕ್ಕೆ ತೆರಳಿದ ಕುಟುಂಬದ ಸದಸ್ಯರು, ವಾಪಸ್ ಮನೆಗೆ ಬರುವುದರೊಳಗೆ ಮನೆಯ ಬೀಗ ಒಡೆದು ಬೀರುವಿನಲ್ಲಿದ್ದ 1 ಕೆ.ಜಿ ಬೆಳ್ಳಿ ಮತ್ತು 30 ಗ್ರಾಂ ಚಿನ್ನವನ್ನು ಕಳ್ಳರು ಕದ್ದೊಯ್ದಿರುವ ಘಟನೆ ನೆಲಮಂಗಲದ ಕಾವೇರಿ ನಗರದಲ್ಲಿ ನಡೆದಿದೆ. ಮಂಜುನಾಥ್ ಮತ್ತು ರೂಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯವರು ದೇವಾಲಯಕ್ಕೆ ಹೋಗಿದನ್ನು ಗಮನಿಸಿರುವ ಕಳ್ಳರು ಈ ಕೃತ್ಯ ಎಸಗಿದ್ದಾರೆ.
ಇಂದು ಮಧ್ಯಾಹ್ನ ಮನೆಯ ಗೇಟ್ ಮುಖ್ಯದ್ವಾರ ಒಡೆದು ಯಾರಿಗೂ ಅನುಮಾನ ಬಾರದಂತೆ ತಮ್ಮ ಕೈಚಳಕ ತೋರಿಸಿದ್ದಾರೆ. ಕಳ್ಳತನದಿಂದ ಅಕ್ಕ ಪಕ್ಕದ ನಿವಾಸಿಗಳು ಆತಂಕಗೊಂಡಿದ್ದಾರೆ. ಹಾಡಹಗಲೇ ಈ ರೀತಿ ಆದರೆ ಮುಂದಿನ ಗತಿಯೇನು ಎಂಬ ಚಿಂತೆ ಸಾರ್ವಜನಿಕರಲ್ಲಿ ಕಾಡತೊಡಗಿದೆ. ಡಿವೈಎಸ್ಪಿ ಜಗದೀಶ್ ಹಾಗೂ ಟೌನ್ ಇನ್ಸ್ಪೆಕ್ಟರ್ ಶಶಿಧರ್ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಅಪಘಾತವೆಸಗಿದ್ದಕ್ಕೆ ವಾಗ್ವಾದ: ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನ ಎಳೆದೊಯ್ದ ಚಾಲಕ