ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ. ಪಾಟೀಲ್, ಡಿ ಕೆ ಶಿವಕುಮಾರ್ ಮಾಧ್ಯಮಗೋಷ್ಟಿ- LIVE - D K SHIVAKUMAR PRESS MEET - D K SHIVAKUMAR PRESS MEET
Published : Aug 1, 2024, 5:06 PM IST
|Updated : Aug 1, 2024, 6:51 PM IST
ಬೆಂಗಳೂರು: ಮುಡಾ ಅಕ್ರಮ ಸಂಬಂಧ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಕಳುಹಿಸಿರುವ ವಿಚಾರ ಸೇರಿದಂತೆ ಹಲವು ಸಂಗತಿಗಳ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಪುಟ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ರಾಜಭವನದ ನೋಟಿಸ್ ವಿರುದ್ಧ ಸಂಪುಟ ಸಭೆ ನಿರ್ಣಯ ಕೈಗೊಳ್ಳುವ ಸಂದರ್ಭದಲ್ಲಿ ತಾವಿರುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ಸಿಎಂ ಉಪಾಹಾರ ಕೂಟ ಆಯೋಜಿಸಿದ್ದು, ಅಲ್ಲಿ ಸಚಿವರಿಗೆ ಹೇಳಬೇಕಾದ್ದನ್ನೆಲ್ಲ ಹೇಳಿ ಕಳುಹಿಸಿದ್ದಾರೆ ಎಂದು ಸಚಿವ ಸಂಪುಟ ಸಭೆಗೆ ಮುನ್ನ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದರು. ಸಂಪುಟ ಸಭೆಯಲ್ಲಿ ಏನೆಲ್ಲ ಚರ್ಚೆ ನಡೆದಿದೆ ಎಂಬುದರ ಬಗ್ಗೆಯೂ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಹೆಚ್.ಕೆ.ಪಾಟೀಲ್ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ್ದ ಹೆಚ್.ಕೆ. ಪಾಟೀಲ್, ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಅದು ತಪ್ಪು ಅಂತ ಅನ್ನಿಸುತ್ತಿದೆ. ಮೌಲ್ಯದ ಆಧಾರದ ಮೇಲೆ ಸಿಎಂ ಸಚಿವ ಸಂಪುಟ ಸಭೆಗೆ ಬರುತ್ತಿಲ್ಲ. ಪ್ರಮುಖ ನಿರ್ಣಯ ಮಾಡೋಕೆ ಹೇಳಿದ್ದಾರೆ. ಸಭೆಯಲ್ಲಿ ನೋಟಿಸ್ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಿದ್ದರು.
Last Updated : Aug 1, 2024, 6:51 PM IST