ಕರ್ನಾಟಕ

karnataka

ETV Bharat / videos

LIVE: 5ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ - CAUVERY DRINKING WATER PROJECT

By ETV Bharat Karnataka Team

Published : Oct 16, 2024, 12:59 PM IST

ಮಂಡ್ಯ: ಬೆಂಗಳೂರಿನ ಜನತೆಗೆ ನೆರವಾಗುವ ಐದನೇ ಹಂತದ ಕಾವೇರಿ ಕುಡಿಯುವ ನೀರು ಯೋಜನೆಯು ಲೋಕಾರ್ಪಣೆಗೊಳ್ಳುತ್ತಿದೆ. ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದೆ. ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಿ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಆವರಣದಲ್ಲಿ ಅದ್ಧೂರಿ ಸಮಾರಂಭ ಏರ್ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಜಪಾನ್​ನ ಜೈಕಾ ಸಂಸ್ಥೆಯ ಪ್ರತಿನಿಧಿಗಳು ನೀರು ಶುದ್ಧೀಕರಣ ಘಟಕದ ಬಟನ್ ಪ್ರೆಸ್​​ ಮಾಡುವುದರ ಮೂಲಕ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಮಾಡುತ್ತಿದ್ದಾರೆ. ಬೆಂಗಳೂರು ಜಲಮಂಡಳಿಯು ಕೈಗೆತ್ತಿಕೊಂಡಿರುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ ಜೈಕಾ ಸಂಸ್ಥೆಯ ಸಹಭಾಗಿತ್ವದಲ್ಲಿ 4,336 ಕೋಟಿ ರೂ.ವೆಚ್ಚದಲ್ಲಿ ಅನುಷ್ಟಾನಗೊಳ್ಳುತ್ತಿದೆ. ದೇಶದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸುವ ನಿಟ್ಟಿನಲ್ಲಿ ಈ ಯೋಜನೆ ಬಹಳ ಪ್ರಮುಖವಾಗಿದೆ. 

ABOUT THE AUTHOR

...view details