ಭದ್ರಾ ಹಿನ್ನೀರಿನಲ್ಲಿ ಕಾಣಿಸಿದ ಕಾಡಾನೆಗಳ ಹಿಂಡು- VIDEO - ಅರಣ್ಯ ಇಲಾಖೆ
Published : Mar 2, 2024, 8:40 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಆರ್ಭಟ ಮುಂದುವರಿದಿದೆ. ಭದ್ರಾ ಜಲಾಶಯದ ಹಿನ್ನೀರಿನಲ್ಲಿ ಕಾಡಾನೆಗಳು ಸ್ವಚ್ಛಂದವಾಗಿ ಈಜಾಡಿದ್ದು, ಒಂದೇ ಜಾಗದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳನ್ನು ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಮಲೆನಾಡು ಭಾಗದಲ್ಲಿ ಪದೇ ಪದೆ ಕಾಡಾನೆ ಹಾವಳಿ ರೈತರು ಹಾಗೂ ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕು ಮೆಣಸೂರು ಗ್ರಾಪಂ ವ್ಯಾಪ್ತಿ ರಾವೂರು ಹಾಗೂ ಲಿಂಗಾಪುರ ಗ್ರಾಮದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ರಾವೂರು ಹಾಗೂ ಲಿಂಗಾಪುರ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಬಂದಿದ್ದನ್ನು ಗಮನಿಸಿದ ಗ್ರಾಮಸ್ಥರು ಕೂಡಲೇ ಶಬ್ದ, ಪಟಾಕಿ ಸಿಡಿಸುವ ಮೂಲಕ ಬೇರೆ ಕಡೆಗೆ ಬೆದರಿಸಿ, ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಡಾನೆಗಳ ಹಾವಳಿಯಿಂದ ಬೇಸತ್ತಿರುವ ಗ್ರಾಮಸ್ಥರು ಅರಣ್ಯ ಇಲಾಖೆಗೆ ಹತ್ತಾರು ಬಾರಿ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆ ಹಾವಳಿ ತಪ್ಪಿಸಲು ಏನಾದರೂ ಶಾಶ್ವತ ಪರಿಹಾರ ಹುಡುಕಬೇಕು ಎಂದು ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದು, ಇದೇ ರೀತಿ ಕಾಡಾನೆ ದಾಳಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಪ್ರತಿಭಟಿಸುವುದಾಗಿ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂಓದಿ:ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಗಜರಾಜ ಪ್ರತ್ಯಕ್ಷ: ಆತಂಕಗೊಂಡ ಜನರು