ಬೊಮ್ಮಸಂದ್ರದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಬಟ್ಟೆ ಕಾರ್ಖಾನೆ - CLOTHS FACTORY CAUGHT FIRE
Published : Jan 2, 2025, 10:27 PM IST
ಬೆಂಗಳೂರು: ಇಲ್ಲಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿನ ಬಟ್ಟೆ ಗೋದಾಮು ಕಾರ್ಖಾನೆಯೊಂದರಲ್ಲಿ ಗುರುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ವಸ್ತು ಹಾಗೂ ಬಟ್ಟೆಗಳು ಸುಟ್ಟು ಕರಕಲಾಗಿವೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ಹೊತ್ತಿಕೊಂಡಿರುವ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಹೈಗ್ರೌಂಡ್ಸ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ ಹಾಗೂ ಸರ್ಜಾಪುರ ಸೇರಿದಂತೆ ಏಳು ಅಗ್ನಿಶಾಮಕ ದಳಗಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದರು. ಭಾರಿ ಪ್ರಮಾಣದಲ್ಲಿ ಆವರಿಸಿದ್ದ ಬೆಂಕಿಯ ಜ್ವಾಲೆಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು. ಮಾಹಿತಿ ತಿಳಿದು ಹೆಬ್ಬಗೋಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಅಗ್ನಿ ದುರಂತ ಹಿನ್ನೆಲೆಯಲ್ಲಿ ಇಡೀ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಹೊಗೆ ಆವರಿಸಿತ್ತು. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿತ್ತು.
ಇದನ್ನೂ ಓದಿ : ಮದ್ಯಪಾನಕ್ಕೆ ಹಣದ ಬೇಡಿಕೆ: ಗಂಡನನ್ನು ಎರಡು ತುಂಡಾಗಿ ಕತ್ತರಿಸಿ ಕೊಲೆ ಮಾಡಿದ ಪತ್ನಿ
ಇದನ್ನೂ ಓದಿ : ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟದ ಕುಕ್ಕರ್ ಸ್ಪೋಟ : ಇಬ್ಬರಿಗೆ ಗಾಯ