LIVE: ಬಜೆಟ್ ಮಂಡನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ - Karnataka Budget 2024
Published : Feb 16, 2024, 4:07 PM IST
|Updated : Feb 16, 2024, 5:15 PM IST
ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಆಯವ್ಯಯ ಸಂಬಂಧ ಹೆಚ್ಚಿನ ವಿವರಣೆ ನೀಡುತ್ತಿರುವ ಸಿಎಂ, ಪ್ರಮುಖ ಅಂಶಗಳನ್ನು ಉಲ್ಲೇಖಿಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ 3,71,383 ಕೋಟಿ ರೂ ಗಾತ್ರದ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಹೊರೆ ನೀಗಿಸಲು ಹೆಚ್ಚಿನ ಸಾಲದ ಮೊರೆ ಹೋಗಿದ್ದಾರೆ. 2024-25ನೇ ಸಾಲಿನಲ್ಲಿ 1,05,246 ಕೋಟಿ ರೂ. ಸಾಲ ಮಾಡಲು ಯೋಜಿಸಿದ್ದಾರೆ. ಬಜೆಟ್ನಲ್ಲಿ ಒಟ್ಟು 2,63,177 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನಿಗದಿಪಡಿಸಲಾಗಿದೆ. 2023-24ರ ಸಾಲಿನ ಬಜೆಟ್ನಲ್ಲಿ ವಾರ್ಷಿಕ ಅಂದಾಜು 98,650 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿತ್ತು. ಇದೀಗ, 2024-25ರ ಸಾಲಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆ ಗುರಿಯು 1,10,000 ಕೋಟಿ ರೂ. ಆಗಿದೆ.
2023-24 ಸಾಲಿನಲ್ಲಿ ವಾರ್ಷಿಕ 11,500 ಕೋಟಿ ರೂ. ಮೋಟಾರು ವಾಹನ ತೆರಿಗೆ ಸಂಗ್ರಹದ ಬಜೆಟ್ ಗುರಿ ಇತ್ತು. ಆ ಪೈಕಿ ಜನವರಿವರೆಗೆ 9,333 ಕೋಟಿ ರೂ. ಸಂಗ್ರಹಣೆ ಆಗಿದೆ. ಇದೀಗ 2024-25 ಸಾಲಿನ ಆಯವ್ಯಯದಲ್ಲಿ ಮೋಟಾರು ಮತ್ತು ವಾಹನ ತೆರಿಗೆ ಮೂಲಕ 13,000 ಕೋಟಿ ರೂ. ಸಂಗ್ರಹದ ಗುರಿ ಹೊಂದಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ 9,000 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ಇದೆ.