ಕರ್ನಾಟಕ

karnataka

ETV Bharat / videos

ವಿಜಯಪುರದ ಮೂವರು ಮಕ್ಕಳು ಸಾವು ಪ್ರಕರಣ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ - Three children died case - THREE CHILDREN DIED CASE

By ETV Bharat Karnataka Team

Published : May 17, 2024, 7:59 PM IST

ವಿಜಯಪುರ: ತ್ಯಾಜ್ಯ ಸಂಸ್ಕರಣಾ ಘಟಕದ ನೀರಲ್ಲಿ ಬಿದ್ದು ಮೃತಪಟ್ಟ ಮೂವರು ಮಕ್ಕಳ ದುರಂತದ ಘಟನೆ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ತಂಡ ನಗರಕ್ಕೆ ಭೇಟಿ ನೀಡಿತು. ಶುಕ್ರವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸುಂಬೆ, ಶೇಖರಗೌಡ ರಾಮತ್ನಾಳ ಅವರ ತಂಡ ನಗರಕ್ಕೆ ಭೇಟಿ ನೀಡಿದ್ದು,‌ ಮೇ 13 ರಂದು ದುರಂತದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿತು.

ತ್ಯಾಜ್ಯ ನೀರಿನ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಂಸ್ಕರಣಾ ಘಟಕದಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಒಂದು ವಾರದ ಒಳಗೆ ಸುತ್ತಲೂ ತಂತಿ ಬೇಲಿ ಹಾಕಿ ಗೇಟ್ ಅಳವಡಿಸಿ ಸಿಸಿ ಕ್ಯಾಮರಾ ಅಳವಡಿಸುವಂತೆ ಸೂಚನೆ ನೀಡಿದರು.  

ಒಂದು ವಾರದ ಒಳಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪಾಲಿಕೆ ಅಧಿಕಾರಿಗಳ ವಿರುದ್ಧ ದೂರು ನೀಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಲ್ಲದೇ ಈ ಕುರಿತು ಸರ್ಕಾರಕ್ಕೂ ವರದಿ ಸಲ್ಲಿಸಲಾಗುತ್ತದೆ ಎಂದು ಆಯೋಗದ ಸದಸ್ಯ ಶಶಿಧರ ಕೋಸುಂಬೆ ಹೇಳಿದರು. ಇನ್ನು ಮೃತಪಟ್ಟ ಮಕ್ಕಳ ಪೋಷಕರಿಗೆ ಪಾಲಿಕೆ ಸೂಕ್ತ ಪರಿಹಾರ ನೀಡಬೇಕು, ಸೂಕ್ತ ಪರಿಹಾರ ನೀಡದಿದ್ದರೂ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು. 

ಇದನ್ನೂ ಓದಿ: ವಿಜಯಪುರ: ಆಟವಾಡಲು ತೆರಳಿ ಕಾಣೆಯಾಗಿದ್ದ ಮೂವರು ಮಕ್ಕಳು ನೀರು ಶುದ್ಧೀಕರಣ ಘಟಕದಲ್ಲಿ ಶವವಾಗಿ ಪತ್ತೆ - Death Of Three Children

ABOUT THE AUTHOR

...view details