ಕೋಲಾರ: ಫ್ಲೆಕ್ಸ್‌ನಲ್ಲಿ ತಮ್ಮ ನಾಯಕರ ಭಾವಚಿತ್ರ ಹಾಕಿಲ್ಲ ಎಂದು ಕೈ ನಾಯಕರ ಗಲಾಟೆ - Kolar
Published : Feb 13, 2024, 10:51 PM IST
ಕೋಲಾರ: ಫ್ಲೆಕ್ಸ್‌ನಲ್ಲಿ ತಮ್ಮ ನಾಯಕರ ಭಾವಚಿತ್ರವನ್ನು ಹಾಕಿಲ್ಲ ಎಂಬ ಕಾರಣಕ್ಕೆ ಕೋಲಾರದಲ್ಲಿ ಇಂದು ಕಾಂಗ್ರೆಸ್ ನಾಯಕರ ಮಧ್ಯೆ ಗಲಾಟೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಉಸ್ತುವಾರಿಗಳಾದ ಪಿ.ಆರ್.ರಮೇಶ್ ಹಾಗೂ ರಾಜ್ ಕುಮಾರ್ ನೇತೃತ್ವದಲ್ಲಿ ಬೂತ್ ಮಟ್ಟದ ಏಜೆಂಟರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಬಹುತೇಕ ಮುಖಂಡರು ಭಾಗವಹಿಸಿದ್ದರು.
ಸಭೆ ಆರಂಭವಾಗುತ್ತಿದ್ದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ಮಾಜಿ ಸ್ಪೀಕರ್ ಬೆಂಬಲಿಗರು ನಮ್ಮ ನಾಯಕರ ಫೋಟೊವನ್ನು ಫ್ಲೆಕ್ಸ್‌ನಲ್ಲಿ ಹಾಕಿಲ್ಲ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಚುನಾವಣೆ ಮಾಡಿದವರನ್ನು ವೇದಿಕೆಯಲ್ಲಿ ಕೂರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುನಿಯಪ್ಪ ಬೆಂಬಲಿಗ ಊರುಬಾಗಲು ಶ್ರೀನಿವಾಸ್ ಹಾಗೂ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರಾದ ಅಂಬರೀಶ್, ಮುರಳಿ, ಅಪ್ಸರ್, ಶಿವಕುಮಾರ್ ನಡುವೆ ವಾಗ್ವಾದ ನಡೆಯಿತು. ಎರಡು ಗುಂಪುಗಳ ನಾಯಕರು ಕೈ ಕೈ ಮಿಲಾಯಿಸುವ ಹಂತ ತಲುಪಿತು. ಸಭೆಯಿಂದ ಹೊರನಡೆದ ಊರುಬಾಗಲು ಶ್ರೀನಿವಾಸ್ ಖಾಸಗಿ ಆಸ್ಪತ್ರೆಗೆ ದಾಖಲಾದರು. ನನ್ನ ಮೇಲೆ ಉದ್ದೇಶಪೂರ್ವಕವಾಗಿ ಶಾಸಕ ಮಂಜುನಾಥ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ: 'ಸ್ವಾಭಿಮಾನದೆದುರು ಪಕ್ಷ ಕಟ್ಟಿಕೊಂಡು ಏನು ಮಾಡಲಿ?': ಪುಟ್ಟಣ್ಣ ಪರ ಪ್ರಚಾರಕ್ಕೆ ಸೋಮಶೇಖರ್ ಸಮರ್ಥನೆ