LIVE: ಮೈಸೂರು ಚಲೋಗೆ ಸೆಡ್ಡು: ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ - Janandolana Program
Published : Aug 9, 2024, 12:39 PM IST
|Updated : Aug 9, 2024, 3:33 PM IST
ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರತಿಪಕ್ಷಗಳಾದ ಬಿಜೆಪಿ - ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನಾಂದೋಲನ ಕಾರ್ಯಕ್ರಮ ನಡೆಯುತ್ತಿದೆ. ಜೊತೆಗೆ, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಹಾಗೂ ಕೇಂದ್ರದ ಮಲತಾಯಿ ದೋರಣೆ ವಿರುದ್ಧ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೈಸೂರಿನಲ್ಲಿ ನಡೆಯುತ್ತಿರುವ ಜನಾಂದೋಲನ ಸಮಾರಂಭದ ನೇರಪ್ರಸಾರ ಇಲ್ಲಿದೆ. ಈಗಾಗಲೇ, ಮೈಸೂರು ಚಲೋ ಪಾದಯಾತ್ರೆ ಘೋಷಣೆ ಬೆನ್ನಲ್ಲೇ, ಬಿಡದಿ, ರಾಮನಗರ, ಮಂಡ್ಯಗಳಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾರಂಭಗಳು ನಡೆದಿವೆ. ಇಂದೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಬೃಹತ್ ಸಮಾರಂಭದ ಮೂಲಕ ಪ್ರತಿಪಕ್ಷಗಳ ಪಾದಯಾತ್ರೆ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಮುಂದಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ 2 ಸಾವಿರಕ್ಕೂ ಹೆಚ್ಚು ಪೊಲೀಸರು, 60ಕ್ಕೂ ಹೆಚ್ಚು ಕೆಎಸ್ಆರ್ಪಿ ತುಕಡಿಗಳು, 30ಕ್ಕೂ ಹೆಚ್ಚು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮದ ಸುತ್ತ ಹಾಗೂ ಪ್ರಮುಖ ಸರ್ಕಲ್ಗಳಲ್ಲಿ 400ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳು ಮತ್ತು 400ಕ್ಕೂ ಹೆಚ್ಚು ಬಾಡಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
Last Updated : Aug 9, 2024, 3:33 PM IST