ಕರ್ನಾಟಕ

karnataka

ETV Bharat / videos

ಚಿಕ್ಕಮಗಳೂರಿನಲ್ಲಿ ಭಾರಿ ಮಳೆ, ಬಡಾವಣೆಗಳಿಗೆ ನುಗ್ಗಿದ ನೀರು; ಕೆರೆ ಏರಿ ಒಡೆದು ಬೆಳೆನಾಶ - Chikkamagaluru Rain

By ETV Bharat Karnataka Team

Published : Aug 19, 2024, 9:21 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಹಲವು ಬಡಾವಣೆಗಳ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಮಧ್ಯಾಹ್ನದಿಂದ ಬಿಟ್ಟು ಬಿಡದೆ ಮಳೆ ಸುರಿದಿದ್ದರಿಂದ ಬಡಾವಣೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಟ ನಡೆಸಿದರು. ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ.  

ರಸ್ತೆಗಳು ಜಲಾವೃತವಾಗಿ ವಾಹನ ಸವಾರರಿಗೆ ತೊಂದರೆಯಾಯಿತು. ನಿನ್ನೆ ರಾತ್ರಿ ಸುರಿದ ಮಳೆಗೆ ಕೆರೆಯ ಏರಿ ಒಡೆದು ಹೋಗಿದೆ. ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನೀರು ನುಗ್ಗಿ ಸುಮಾರು 30 ಎಕರೆ ಬೆಳೆ ನಾಶವಾಗಿದೆ. 

ಜೋಳ, ರಾಗಿ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ. ಕೆರೆ ಏರಿ ಒಡೆದು ಹೋದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಹೊರ ಹೋಗುತ್ತಿದೆ. ಬೇಸಿಗೆಯಲ್ಲಿ ನೀರಿನ ಅಭಾವಕ್ಕೆ ಸಿಲುಕುವ ಗ್ರಾಮಸ್ಥರು ಮುಂದೆ ನಮ್ಮ ಪರಿಸ್ಥಿತಿ ಏನು ಎಂಬ ಯೋಚನೆಯಲ್ಲಿ ತೊಡಗುವಂತಾಗಿದೆ. ಕೂಡಲೇ ಏರಿ ದುರಸ್ತಿ ಮಾಡಿ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕರಾವಳಿ, ದಕ್ಷಿಣ ಒಳನಾಡಿನ 8 ಜಿಲ್ಲೆಗಳಿಗೆ ನಾಳೆ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ - Karnataka Rain Alert

ABOUT THE AUTHOR

...view details