ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಅನ್ನೋದು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್ - DCM DK Shivakumar - DCM DK SHIVAKUMAR
Published : Sep 29, 2024, 9:49 PM IST
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ. ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಪ್ರಶ್ನಿಸಿದರು.
ಲೋಕಾಯುಕ್ತ, ಎಸ್ಐಟಿ, ಎಡಿಜಿಪಿ ಚಂದ್ರಶೇಖರ್ ಅವರ ಬಗ್ಗೆ ತಮಗೆ ತಿಳಿದಿದೆ. ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂದು ಕುಮಾರಸ್ವಾಮಿ ಅವರು ಮಾಡಿರುವ ಆರೋಪದ ಬಗ್ಗೆ ನೆಲಮಂಗಲದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನಿನ್ನೆ ಊರಿನಲ್ಲೇ ಇರಲಿಲ್ಲ. ಸಾತನೂರು, ಕನಕಪುರದಲ್ಲಿ ಕ್ಷೇತ್ರದ ಕೆಲಸದ ಸಂಬಂಧ ಪ್ರವಾಸ ಕೈಗೊಂಡಿದ್ದೆ. ಕುಮಾರಸ್ವಾಮಿ ಅವರು ಕೆಪಿಸಿಸಿ ಎಳೆದುತಂದರೆ ನಾನು ಏನ್ತಾನೇ ಮಾತನಾಡಲು ಸಾಧ್ಯ ಎಂದು ಕೇಳಿದರು.
ಕುಮಾರಸ್ವಾಮಿ ತಮ್ಮ ಬಳಿ 7 ಸಚಿವರ ಅಕ್ರಮಗಳ ಬಗ್ಗೆ ದಾಖಲೆಗಳಿವೆ ಎಂದು ಹೇಳುತ್ತಿದ್ದಾರೆ ಎಂದು ಕೇಳಿದಾಗ, "ಅವರ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಚಂದ್ರಶೇಖರ್ ಅವರನ್ನು ನಾನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ, ನನಗೆ ಅವರು ಸಿಕ್ಕಿಲ್ಲ, ನನಗೆ ಅವರು ಗೊತ್ತೇ ಇಲ್ಲ ಎಂದರು.