ಕರ್ನಾಟಕ

karnataka

ETV Bharat / videos

ಮಾದಪ್ಪನ ಬೆಟ್ಟದಲ್ಲಿ ಜಾತ್ರಾ ಸಡಗರ : ನದಿ ದಾಟಿ ಬರುತ್ತಿರುವ ಪಾದಯಾತ್ರಿಗಳು - Temporary Primary Health Centre

By ETV Bharat Karnataka Team

Published : Mar 5, 2024, 7:41 PM IST

ಚಾಮರಾಜನಗರ : ನಾಡಿನ‌ ಪ್ರಸಿದ್ಧ ಯಾತ್ರಸ್ಥಳಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಲಕ್ಷಾಂತರ ಮಂದಿ ಭಕ್ತರು ಕಾಲ್ನಡಿಗೆಯಲ್ಲಿ ಬರುತ್ತಿದ್ದಾರೆ.

ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಕೊಡಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, ಚನ್ನಪಟ್ಟಣ, ಬೆಂಗಳೂರಿನಿಂದ ಕಾವೇರಿ ನದಿ ಸಂಗಮದ ಮೂಲಕ ಆಗಮಿಸುತ್ತಿದ್ದಾರೆ.‌ ಮಂಡ್ಯ, ಮೈಸೂರು ಭಾಗದಿಂದಲೂ ರಸ್ತೆ ಮಾರ್ಗವಾಗಿ ಭಕ್ತರು ಬರುತ್ತಿದ್ದಾರೆ.

ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. 
ಪಾದಯಾತ್ರಿಗಳ ಅನುಕೂಲಕ್ಕಾಗಿ ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಸುಮಾರು 10 ಕಡೆ ಮಿನಿಟ್ಯಾಂಕ್ ಗಳನ್ನು ಇಡಲಾಗಿದ್ದು, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಇದಲ್ಲದೇ ಭಕ್ತಾದಿಗಳ ಆರೋಗ್ಯ ದೃಷ್ಟಿಯಿಂದ ತಾಳು ಬೆಟ್ಟದಲ್ಲಿ ತಾತ್ಕಾಲಿಕ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ. ಬರುವಂತಹ ಭಕ್ತಾದಿಗಳಿಗೆ ತೊಂದರೆಯಾಗದಿರಲಿ ಎಂದು ಐವತ್ತಕ್ಕೂ ಹೆಚ್ಚು ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದ್ದಾರೆ.

ವಯಸ್ಸಿನ ಬೇಧವಿಲ್ಲದೇ ಮಕ್ಕಳಿಂದ ವೃದ್ಧರವರೆಗೂ ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಭಕ್ತಸಾಗರವೇ ಹರಿದುಬರುತ್ತಿದ್ದು, ಮಾ.7 ರಿಂದ 10 ರವರೆಗೆ ವೈಭವದಿಂದ ಶಿವರಾತ್ರಿ ಜಾತ್ರೆ ನಡೆಯಲಿದೆ.

ಇದನ್ನೂ ಓದಿ : ಒಂದೇ ವರ್ಷದಲ್ಲಿ ಮಲೆ ಮಾದಪ್ಪನ ಬೆಟ್ಟಕ್ಕೆ 50 ಲಕ್ಷ ಭಕ್ತರ ಆಗಮನ: 63 ಕೋಟಿ ರೂ. ಆದಾಯ ಸಂಗ್ರಹ

ABOUT THE AUTHOR

...view details