LIVE: 7ನೇ ವೇತನ ಆಯೋಗ ಜಾರಿ; ಸರ್ಕಾರಿ ನೌಕರರಿಂದ ಸಿಎಂ, ಡಿಸಿಎಂಗೆ ಅಭಿನಂದನಾ ಸಮಾರಂಭ - Felicitation Ceremony - FELICITATION CEREMONY
Published : Aug 17, 2024, 1:32 PM IST
ಬೆಂಗಳೂರು: ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 'ನಮ್ಮ ಅಭಿಮಾನ' ಅಭಿನಂದನೆ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯ ಸರ್ಕಾರ ನೌಕರರ ಸಂಘ ಹಾಗೂ ವೃಂದ ಸಂಘಗಳಿಂದ ಅಭಿನಂದನಾ ಸಮಾರಂಭ ಹಾಗೂ ಕಾರ್ಯಗಾರ ಕಾರ್ಯಕ್ರಮವು ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆಳವಣಿಗೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ ರಚಿಸಲಾಗಿದ್ದ ರಾಜ್ಯ 7ನೇ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರಿಗೆ ಶೇ. 27.50ರಷ್ಟು ಫಿಟ್‌ಮೆಂಟ್ ಹೆಚ್ಚಳ ಮಾಡಲು ಶಿಫಾರಸು ಬಳಿಕ ಈಗ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಬಳಿಕ ವೇತನ ಆಯೋಗದ ಶಿಫಾರಸನ್ನು ಯಥಾವತ್ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಕಾರ್ಯಕ್ರಮದ ಕುರಿತಾದ ಸುದ್ದಿಗೋಷ್ಟಿಯಲ್ಲಿ ಇತ್ತೀಚೆಗೆ ತಿಳಿಸಿದ್ದರು.