ದೊಡ್ಡಬಳ್ಳಾಪುರ: ಬೋನಿಟ್ಟ ಎರಡೇ ತಾಸಿಗೆ ಹೆಣ್ಣು ಚಿರತೆ ಸೆರೆ - Leopard Captured - LEOPARD CAPTURED
Published : Sep 26, 2024, 11:33 AM IST
ದೊಡ್ಡಬಳ್ಳಾಪುರ: ಕಳೆದ ಆರು ತಿಂಗಳಿನಿಂದ ಹುಲುಕುಡಿ ಬೆಟ್ಟದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದೆ. ಇವುಗಳ ಸೆರೆಗಾಗಿ ಮಂಗಳವಾರ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು ಬಿದ್ದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಲ್ಲಿರುವ ಮಾಡೇಶ್ವರ ಗ್ರಾಮದಲ್ಲಿ ಚಿರತೆಗಳ ಉಪಟಳ ಹೆಚ್ಚಾಗಿದ್ದು, ಬೆಟ್ಟದಲ್ಲಿ ನಾಲ್ಕೈದು ಚಿರತೆಗಳು ವಾಸವಾಗಿವೆ. ಬೆಟ್ಟದ ಸುತ್ತಮುತ್ತಲ ಗ್ರಾಮಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದವು. ತೋಟದ ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾಗಳಲ್ಲೂ ಚಿರತೆಗಳ ಚಲನವನ ಸೆರೆಯಾಗಿತ್ತು.
ಇದರಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಮಂಗಳವಾರ ಸಂಜೆ 6:30ರ ಸುಮಾರಿಗೆ ಗ್ರಾಮದ ಹೊರಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇಟ್ಟಿದ್ದು, ಎರಡೇ ತಾಸಿನಲ್ಲಿ 18 ತಿಂಗಳ ಹೆಣ್ಣು ಚಿರತೆ ಸೆರೆಯಾಗಿದೆ.
ಚಿರತೆಯನ್ನು ದೊಡ್ಡಬಳ್ಳಾಪುರ ಅರಣ್ಯ ಇಲಾಖೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಸದ್ಯಕ್ಕೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟರೂ ಬೆಟ್ಟದಲ್ಲಿ ಇನ್ನೂ ನಾಲ್ಕೈದು ಚಿರತೆಗಳಿವೆ.
ಇದನ್ನೂ ಓದಿ: ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ರಾಜಾರೋಷವಾಗಿ ಫ್ಲೈಓವರ್ ದಾಟಿದ ಚಿರತೆ - leopard crossing road