ಕರ್ನಾಟಕ

karnataka

ETV Bharat / videos

ಬೆಂಗಳೂರು : ಕಾಡುಗೋಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ಚಾಚಿದ ಹೊಗೆ - Fire broke out in Kadugodi forest - FIRE BROKE OUT IN KADUGODI FOREST

By ETV Bharat Karnataka Team

Published : Mar 31, 2024, 6:42 PM IST

ಬೆಂಗಳೂರು : ನಗರದ ಹೊರವಲಯದ ಕಾಡುಗೋಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದಲ್ಲಿ ಹೊಗೆ ವ್ಯಾಪಿಸಿದೆ. ಸುಮಾರು 700 ಎಕರೆಯಷ್ಟು ವಿಸ್ತೀರ್ಣದಲ್ಲಿರುವ ವೈಟ್ ಫೀಲ್ಡ್ ಮುಖ್ಯರಸ್ತೆಯ ಐಟಿಪಿಎಲ್ ಮುಂಭಾಗದಲ್ಲಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ವ್ಯಾಪಿಸತೊಡಗಿದೆ. 

ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಾಲ್ಕಕ್ಕೂ ಅಧಿಕ ಅಗ್ನಿಶಾಮಕ ವಾಹನಗಳೊಂದಿಗೆ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಆಕಸ್ಮಿಕ ಬೆಂಕಿ ತಗುಲಿ ನಾಲ್ಕು ಕಾರುಗಳು ಸಂಪೂರ್ಣ ಭಸ್ಮ: ಚಿಕ್ಕಮಗಳೂರು ನಗರದಲ್ಲಿ ಬೇಸಿಗೆಯ ಬೇಗೆ ತೀವ್ರ ಗೊಳ್ಳುತ್ತಿದ್ದಂತೆ ಅಗ್ನಿ ಅವಘಡಗಳು ಕೂಡಾ ಹೆಚ್ಚುತ್ತಿವೆ. ಆಕಸ್ಮಿಕವಾಗಿ ಹುಲ್ಲಿಗೆ ಹತ್ತಿದ ಬೆಂಕಿಯಿಂದಾಗಿ ನಾಲ್ಕು ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಉಪ್ಪಳ್ಳಿಯ ಬದ್ರಿಯಾ ಗ್ಯಾರೇಜ್​ನ ಪಕ್ಕದಲ್ಲಿ (ಮಾರ್ಚ್​-25-24) ನಡೆದಿತ್ತು.

ಮಲೆನಾಡಲ್ಲೂ ರಣ ಬಿಸಿಲು ಭೂಮಿಯನ್ನು ಕಾದ ಕಾವಲಿಯಂತೆ ಮಾಡಿದೆ. ಇದರ ಮಧ್ಯೆ ಬೆಂಕಿ ಅವಘಡ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಗ್ಯಾರೇಜ್​ನ ಆವರಣದಲ್ಲಿ ರಿಪೇರಿಗೆಂದು ನಿಲ್ಲಿಸಿದ್ದ ಕಾರುಗಳ ಪಕ್ಕದಲ್ಲಿ ಒಣ ಹುಲ್ಲು, ಕಸ-ಕಡ್ಡಿಗಳು ಇವೆ. ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಗ್ಯಾರೇಜ್​ ಆವರಣದಲ್ಲಿ ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿತ್ತು.

ಇದನ್ನೂ ಓದಿ : ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ತಗುಲಿ ನಾಲ್ಕು ಕಾರುಗಳು ಸಂಪೂರ್ಣ ಭಸ್ಮ - Cars Burnt In Chikkamagaluru

ABOUT THE AUTHOR

...view details