ಕರ್ನಾಟಕ

karnataka

ETV Bharat / videos

ಹೆಚ್‌. ಡಿ. ಕುಮಾರಸ್ವಾಮಿ ತುರ್ತು ಮಾಧ್ಯಮಗೋಷ್ಟಿ - LIVE - H D Kumaraswamy Press Meet - H D KUMARASWAMY PRESS MEET

By ETV Bharat Karnataka Team

Published : May 7, 2024, 11:45 AM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​.ಡಿ. ಕುಮಾರಸ್ವಾಮಿ ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ತುರ್ತು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ವಿಧಾನ ಪರಿಷತ್​ ಸದಸ್ಯ ಶರವಣ ಸೇರಿದಂತೆ ಜೆಡಿಎಸ್ ನಾಯಕರು ಉಪಸ್ಥಿತರಿದ್ದಾರೆ.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ ಕುಮಾರಸ್ವಾಮಿ ಅವರು ತುರ್ತು ಮಾಧ್ಯಮಗೋಷ್ಟಿ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಮಾಧ್ಯಮಗೋಷ್ಟಿಯಲ್ಲಿ ರಾಜ್ಯವ್ಯಾಪಿ ಪ್ರತಿಭಟನೆಯ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಇದೆ.ಕೆಲವು ಮುಖಂಡರು ಹೆಚ್‌.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ರಾಜ್ಯ ಸರ್ಕಾರ ತುಂಬಾ ಕೀಳಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಜೆಡಿಎಸ್ ಪಕ್ಷ, ಇಂದಿನಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಈ ಪ್ರತಿಭಟನೆಗೆ ಲೋಕಸಭೆ ಚುನಾವಣೆ ಮಾಡಿಕೊಂಡಿರುವ ಮೈತ್ರಿ ಪಕ್ಷ ಬಿಜೆಪಿ ಕೂಡ ಬೆಂಬಲ ನೀಡುವ ಸಾಧ್ಯತೆ ಇದೆ. ಜೆಡಿಎಸ್ ಕಚೇರಿ ಜೆಪಿ ಭವನದ ಬಳಿ ಮಂಗಳವಾರ ಬೃಹತ್ ಪ್ರತಿಭಟನೆ ಕೂಡ ನಡೆಸಲಾಯಿತು. 

ABOUT THE AUTHOR

...view details