ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದ ಸ್ಫೋಟಗೊಂಡ ಜೆಸ್ಕಾಂ ಸ್ಟೇಷನ್ ಟ್ರಾನ್ಸ್‌ಫಾರ್ಮರ್ - Fire Accident - FIRE ACCIDENT
🎬 Watch Now: Feature Video
Published : Mar 30, 2024, 10:19 AM IST
ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದಾಗಿ ಜೆಸ್ಕಾಂ 220 ಕೆ.ವಿ ಸ್ಟೇಷನ್‌ನಲ್ಲಿ ಟ್ರಾನ್ಸ್‌ಫಾರ್ಮರ್ (ಟಿಸಿ)ಗಳು ಹೊತ್ತಿ ಉರಿದ ಘಟನೆ ನಡೆದಿದೆ. ನಗರದಲ್ಲಿ ನಿನ್ನೆ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದೆ. ಮೂರು ಟಿಸಿ ಸ್ಫೋಟಗೊಂಡು ಭಸ್ಮವಾಗಿವೆ ಎಂದು ಹೇಳಲಾಗುತ್ತಿದೆ.
ಬೇಸಿಗೆ ಹಿನ್ನೆಲೆ ತಾಪಮಾನ ಹೆಚ್ಚಳವಾಗಿದ್ದು, ವಿದ್ಯುತ್ ಬೇಡಿಕೆ ಕೂಡ ಹೆಚ್ಚು ಇದೆ. ಆದರೆ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಟ್ರಾನ್ಸ್ಫಾರ್ಮರ್ಗಳು ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿ ಉರಿದಿವೆ. ಸ್ಟೇಷನ್ ವೈರ್‌ಗಳು ಸಹ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಹಾಸ ಪಟ್ಟರು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣವೇ ಅಥವಾ ವಿದ್ಯುತ್ ಓವರ್ ಲೋಡ್ನಿಂದ ಸಂಭವಿಸಿದೆಯಾ ಎನ್ನುವುದು ನಿಖರವಾಗಿ ತಿಳಿದುಬಂದಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪಶ್ಚಿಮ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.