ಕರ್ನಾಟಕ

karnataka

ETV Bharat / videos

ಇನ್ನೋವಾ ಕಾರಿಗೆ ಇನ್ಸುಲೇಟರ್​ ವಾಹನ ಡಿಕ್ಕಿ, ನಾಲ್ವರಿಗೆ ಗಾಯ- ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ - INNOVA CAR ACCIDENT

By ETV Bharat Karnataka Team

Published : Nov 21, 2024, 11:29 AM IST

ಉಡುಪಿ: ಇನ್ನೋವಾ ಕಾರಿಗೆ ಹಿಂದಿನಿಂದ ಇನ್ಸುಲೇಟರ್​ ವಾಹನ​​​ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಮಂದಿ ಕೊಲ್ಲೂರು ದೇವರ ದರ್ಶನ ಮುಗಿಸಿ ಕೇರಳ ಕಡೆಗೆ ಪ್ರಯಾಣಿಸುತ್ತಿದ್ದರು. ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮೀಪ ಹೆದ್ದಾರಿಯಲ್ಲಿ ಕಾರನ್ನು ರಿವರ್ಸ್ ತೆಗೆಯುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಮೀನು ತುಂಬಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೋಟೇಶ್ವರ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ.

ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕುಂದಾಪುರ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಅಪಘಾತದ ದೃಶ್ಯ ಎದೆ ಝಲ್ಲೆನಿಸುವಂತಿದೆ.

ಇದನ್ನೂ ಓದಿ: ಮರಕ್ಕೆ ಡಿಕ್ಕಿ ಹೊಡೆದು ಕ್ರೂಸರ್ ಪಲ್ಟಿ: ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಜನರಿಗೆ ಗಾಯ

ABOUT THE AUTHOR

...view details