ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ನಾಯಕರ ಸೇರ್ಪಡೆ, ಸುದ್ದಿಗೋಷ್ಟಿ - LIVE - JDS Leaders Join Congress - JDS LEADERS JOIN CONGRESS
Published : Mar 22, 2024, 1:56 PM IST
|Updated : Mar 22, 2024, 2:39 PM IST
ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿ ತಿಬ್ಬೇಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಶಾಸಕ ಅಪ್ಪಾಜಿಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ. ಕೆಪಿಸಿಸಿ ಕಚೇರಿಯಲ್ಲಿಂದು ಪಕ್ಷದ ರಾಜ್ಯಾಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಟಿ ಕರೆದಿದ್ದಾರೆ. ಈ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ. ಲೋಕಸಭಾ ಚುನಾವಣಾ ಸನಿಹದಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಭಾರಿ ಕಾರ್ಯಾಚರಣೆ ನಡೆಸಿದೆ. ಮಂಡ್ಯದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅಥವಾ ನಿಖಿಲ್ ಸ್ಪರ್ಧೆ ಎಂಬ ಚರ್ಚೆ ಹಿನ್ನೆಲೆ ಆಪರೇಷನ್ ಹಸ್ತ ನಡೆಸಿದೆ.ಗುರುವಾರವಷ್ಟೇ ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡರು ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಅವರು ಕುಟುಂಬ ರಾಜಕಾರಣಕ್ಕೆ ಬೇಸತ್ತು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಪಕ್ಷದಲ್ಲಿ ನಿಷ್ಠಾವಂತ ಶಾಸಕನಾಗಿ ಕೆಲಸ ಮಾಡಿದ್ದೇನೆ. ಶಿಕ್ಷಕ ಸಮುದಾಯದ ಹಿತವನ್ನು ಕಾಪಾಡಿದ್ದೇನೆ. ಹೆಚ್ ಡಿ ಕುಮಾರಸ್ವಾಮಿಯವರು ನಮ್ಮಲ್ಲಿ ಭಿನ್ನಾಭಿಪ್ರಾಯ ತಂದು ನಮ್ಮನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದ್ದರು.
Last Updated : Mar 22, 2024, 2:39 PM IST