ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಪಿಕಪ್ ವಾಹನ - ವಿಡಿಯೋ - Pickup vehicle fell into ditch
Published : Feb 9, 2024, 7:55 AM IST
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಿಕಪ್ ವಾಹನ ಬಿದ್ದಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೀನಾರಿ ಸಮೀಪ ನಡೆದಿದೆ. ಘಟನೆಯಲ್ಲಿ ಜೀಪ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಹೀನಾರಿ ಸಮೀಪದ ತಿರುವಿನಲ್ಲಿ ತಡೆ ಗೋಡೆ ಇಲ್ಲದೇ ಇರುವುದರಿಂದ ಕಂದಕಕ್ಕೆ ಪಿಕಪ್ ವಾಹನ ಬೀಳಲು ಪ್ರಮುಖ ಕಾರಣವಾಗಿದೆ. ರಾತ್ರಿ ವೇಳೆ ಪ್ರವಾಸಿಗರು ಎಚ್ಚರಿಕೆಯಿಂದ ನಿಧಾನವಾಗಿ ವಾಹನ ಚಲಾಯಿಸಬೇಕು. ಕಳೆದ ಆರು ತಿಂಗಳಲ್ಲಿ ಇದೇ ರೀತಿ ಎಂಟರಿಂದ ಒಂಬತ್ತು ಬಾರಿ ಅಪಘಾತ ನಡೆದಿದೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಮುಂದಾದರು ಅಧಿಕಾರಿಗಳು ಎಚ್ಚೆತ್ತುಕೊಂಡು ತಡೆಗೋಡೆ ಮತ್ತು ಸೂಚನಾ ಫಲಕಗಳನ್ನು ತಿರುವಿನಲ್ಲಿ ಅಳವಡಿಸಬೇಕು ಎಂದು ಸ್ಥಳೀಯರಾದ ವಿಜಯ್ ಎಂಬುವವರು ಆಗ್ರಹಿಸಿದರು.
ಇದನ್ನೂ ಓದಿ : ಬೆಳಗಾವಿ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟೇಲರ್ ಪಲ್ಟಿ; ಮೂವರು ಮಹಿಳೆಯರು ಸಾವು